ಬ್ರೇಕಿಂಗ್ ನ್ಯೂಸ್
16-05-24 12:11 am HK News Desk ಕರ್ನಾಟಕ
ಮೈಸೂರು, ಮೇ.16: ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಘೋಷಿತ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಿ ಫಾರಂ ಇಲ್ಲದೆ ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದು ಕುತೂಹಲ ಮೂಡಿಸಿದ್ದಾರೆ.
ಈ ಮೊದಲು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಈ.ಸಿ ನಿಂಗರಾಜೇಗೌಡ ಅವರ ಹೆಸರು ಘೋಷಿಸಲಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಜೆಡಿಎಸ್ ನಾಯಕರ ಒತ್ತಾಯದಂತೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಅಭ್ಯರ್ಥಿ ಈ.ಸಿ ನಿಂಗರಾಜೇಗೌಡ ಬಂಡಾಯ ಅಭ್ಯರ್ಥಿಯಾಗಿ ಬುಧವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ, ಮಾತನಾಡಿದ ಡಾ.ಈ.ಸಿ ನಿಂಗರಾಜೇಗೌಡ, ನಾಳೆ ಬೆಳಗ್ಗೆ 11 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ಬಿ ಫಾರ್ಮ್ ಜತೆ ನಾಮಪತ್ರ ಸಲ್ಲಿಸುತ್ತೇನೆ. ಈ ಬಗ್ಗೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ತಿಳಿಸಿದ್ದಾರೆ. ಜೆಡಿಎಸ್ ವಿವೇಕಾನಂದಗೆ ಬಿ ಫಾರಂ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ಬಿಜೆಪಿ ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಜೆಡಿಎಸ್ ನಾಯಕರ ಜತೆ ಚರ್ಚಿಸಿ, ನನ್ನ ಹೆಸರು ಅಂತಿಮಗೊಳಿಸಲಾಗಿದೆ. ಒಮ್ಮೆ ಅಭ್ಯರ್ಥಿ ಘೋಷಣೆ ಬಳಿಕ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದ್ದಾರೆ.
ಜೆಡಿಎಸ್ಸಿಗೂ ಬಂಡಾಯದ ಬಿಸಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್‌ಗಾಗಿ ವಿವೇಕಾನಂದ ಹಾಗೂ ಕೆ.ಟಿ ಶೀಕಂಠೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ, ಅಂತಿಮವಾಗಿ ವಿವೇಕಾನಂದ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿದೆ. ಇದರಿಂದ ಸಿಟ್ಟುಗೊಂಡ ಕೆ.ಟಿ ಶ್ರೀಕಂಠೇಗೌಡ ಬಂಡಾಯ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶೀಯಲ್ ಮಿಡಿಯಾದಲ್ಲಿ ಪ್ರತಿಕ್ರಿಯಿಸಿರುವ ಅವರು, ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ ಮತ್ತೊಮ್ಮೆ ನಿಮ್ಮ ಬಳಿ ಬರುತ್ತಿದ್ದೇನೆ. ನನ್ನುನ್ನು ಬೆಂಬಲಿಸಿ. ನಾಳೆ(ಮೇ 16 ) ಬೆಳಿಗ್ಗೆ 11 ಗಂಟೆಗೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.
The Bharatiya Janata Party (BJP), which had announced candidates to five of the six Legislative Council seats leaving one to its alliance partner the Janata Dal (Secular), will likely give up another seat to its partner making the seat-sharing formula to 4-2. Six Council seats go to polls on June 3.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm