ಬ್ರೇಕಿಂಗ್ ನ್ಯೂಸ್
21-05-24 05:02 pm HK News Desk ಕರ್ನಾಟಕ
ಮೈಸೂರು, ಮೇ 21: ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಕೆ.ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ಉಳಿದಂತೆ 48ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲುಷಿತ ನೀರು ಸೇವಿಸಿ ಕನಕರಾಜು (24) ಎಂಬ ಯುವಕ ತೀವ್ರವಾಗಿ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮುಂಜಾಗ್ರತಾ ಕ್ರಮವಾಗಿ ಕೆ.ಸಾಲುಂಡಿ ಗ್ರಾಮಕ್ಕೆ ವೈದ್ಯಾಧಿಕಾರಿಗಳ ತಂಡದೊಂದಿಗೆ ಆಂಬ್ಯುಲೆನ್ಸ್ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಮಾಹಿತಿ ತಿಳಿಸಿದ್ದಾರೆ.

ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ:
ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದ್ದಾರೆ.
ಆಸ್ಪತ್ರೆಗೆ ಶಾಸಕ ಜಿ.ಟಿ. ದೇವೇಗೌಡ ಭೇಟಿ:
ಕಲುಷಿತ ನೀರು ಸೇವನೆ ಮಾಡಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವರನ್ನು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮೃತ ಯುವಕನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿದರು.
ಈ ಬಗ್ಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರತಿಕ್ರಿಯಿಸಿದ್ದು, ಕಲುಷಿತ ನೀರಿನಿಂದಲೇ ಈ ಪ್ರಕರಣ ಆಗಿದೆ ಎಂಬುದು ಖಚಿತವಾಗಿಲ್ಲ. ನೀರನ್ನು ಪ್ರಯೋಗಾಲಕ್ಕೆ ಕಳುಹಿಸಲಾಗಿದೆ. ವರದಿ ಬರಬೇಕಿದೆ. ಸದ್ಯಕ್ಕೆ ಗ್ರಾಮದಲ್ಲೇ ತುರ್ತು ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
Mysuru 23 old youth dies after drinking contaminated water, 48 people fall sick. The diseased has been identified as kanakaraju. CM Siddaramaiah spoken to the health department to conduct Probe over the water contamination.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm