ಬ್ರೇಕಿಂಗ್ ನ್ಯೂಸ್
22-05-24 04:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ದಾಳಿ ನಡೆಸಿ ವೈದ್ಯ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ 11 ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿದ್ದು, ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದೆ.
ಮಂಗಳವಾರ ಮುಂಜಾನೆ ಬೆಂಗಳೂರಿನ ಜೆ.ಪಿ. ನಗರ ಮತ್ತು ಹೆಗಡೆ ನಗರದ ಎರಡು ಕಡೆ ಹಾಗೂ ಹುಬ್ಬಳ್ಳಿಯ ಕಸಬಾ ಪೇಟೆ ಠಾಣೆ ವ್ಯಾಪ್ತಿಯ 2 ಕಡೆ ಇಬ್ಬರ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ. ಈ ವೇಳೆ, ಬೆಂಗಳೂರಿನಲ್ಲಿ ಡಾ. ಸಬೀಲ್ ಅಹ್ಮದ್ ಅಲಿಯಾಸ್ ಮೋಟು ಡಾಕ್ಟರ್ ಮತ್ತು ಹುಬ್ಬಳ್ಳಿಯ ಶೋಯಬ್ ಮಿರ್ಜಾ ಅಲಿ ಯಾಸ್ ಛೋಟು ಹಾಗೂ ಈತನ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್‌ಗೆ ವಿದೇಶದಲ್ಲಿರುವ ಹ್ಯಾಂಡ್ಲರ್‌ಗಳ ಸೂಚನೆ ಮೇರೆಗೆ ಆರ್ಥಿಕ ನೆರವು ನೀಡಿದ್ದರು. ಅಲ್ಲದೆ ಈ ಹಿಂದೆ ಇದೇ ಆರೋಪಿಗಳನ್ನು ವಿದೇಶದಿಂದಲೇ ನಿಯಂತ್ರಿಸುತ್ತಿದ್ದರು ಎನ್ನಲಾಗಿದೆ. ದಾಳಿ ಸಂದರ್ಭದಲ್ಲಿ ಡಿಜಿಟಲ್ ಸಾಮಗ್ರಿ ಹಾಗೂ ಕೆಲವು ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರರು ಕೋಡ್‌ವರ್ಡ್ ಮೂಲಕ ಸಂಭಾಷಣೆ ನಡೆಸುತ್ತಿದ್ದರು. ಜೊತೆಗೆ, ಐಸಿಸ್ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಮೇರೆಗೆ 10-12 ಜನರಿದ್ದ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಆಗಮಿಸಿತ್ತು. ಮಂಗಳವಾರ ಬೆಳಗ್ಗೆ ಪ್ರತ್ಯೇಕ ಮೂರು ತಂಡಗಳಲ್ಲಿ ಕಸಬಾಪೇಟೆ ವ್ಯಾಪ್ತಿಯ ಹಳೇ ಹುಬ್ಬಳ್ಳಿ ರಜಿಯಾ ಟೌನ್ ನಿವಾಸಿ ಶೋಯೆಬ್ ಮಿರ್ಜಾ ಹಾಗೂ ಸಹೋದರ ಅಜೀಜ್ ಅಹಮದ್ ಮಿರ್ಜಾ ನಿವಾಸಕ್ಕೆ ತೆರಳಿ ವಿಚಾರಣೆ ಆರಂಭಿಸಿದ್ದರು. ಅನಂತರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಎನ್‌ಐಎ ಕಚೇರಿಗೆ ಕರೆದೊಯ್ದರು ಎನ್ನಲಾಗಿದೆ.
The National Investigation Agency (NIA) has arrested three persons, including a doctor, in connection with the Rameswaram café blast case. The NIA conducted searches at 11 locations in Karnataka, Telangana, Andhra Pradesh and Tamil Nadu and detained 11 people.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm