ಬ್ರೇಕಿಂಗ್ ನ್ಯೂಸ್
22-05-24 05:51 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22: ಶಾಸಕ ಹರೀಶ್ ಪೂಂಜ ಅವರನ್ನು ಪೊಲೀಸರು ಬಂಧಿಸಲು ಪ್ರಯತ್ನ ಪಡುತ್ತಿರುವುದನ್ನು ಖಂಡಿಸುತ್ತೇನೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಕರ್ತವ್ಯ. ನಮ್ಮ ಶಾಸಕರು, ಕಾರ್ಯಕರ್ತರನ್ನು ವಿನಾಕಾರಣ ಪಿತೂರಿ ನಡೆಸಿ, ಬಂಧನಕ್ಕೆ ಮುಂದಾದರೆ ಅದರಿಂದಾಗುವ ಪರಿಣಾಮಗಳಿಗೆ ಪೊಲೀಸರೇ ಹೊಣೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ''ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿಯಲ್ಲಿ ಅಕ್ರಮ ಗಣಿಗಾರಿಕೆ ಸಂಬಂಧ ಪೊಲೀಸರು ಎಫ್ಐಆರ್ ಹಾಕಿದ್ದಾರೆ. ನಮ್ಮ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಹೆಸರನ್ನೂ ಎಫ್ಐಆರ್ ನಲ್ಲಿ ಸೇರಿಸುವ ಪಿತೂರಿ ಮಾಡಲಾಗಿದೆ. ಇದರ ಬಗ್ಗೆ ಹರೀಶ್ ಪೂಂಜಾ ಪ್ರಶ್ನೆ ಮಾಡಿದ್ದು ಪೊಲೀಸರ ನಡೆಯನ್ನು ಖಂಡಿಸಿದ್ದಾರೆ. ಕಾರ್ಯಕರ್ತರ ಪರವಾಗಿ ಪೊಲೀಸ್ ಠಾಣೆಗೆ ಹೋಗಿ ಶಾಸಕರು ಗಲಾಟೆ ಮಾಡಿದ್ದು ನಿಜ. ಕಾರ್ಯಕರ್ತರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿದ್ದನ್ನು ಖಂಡಿಸಿದ್ದಾರೆ.
ಆದರೆ ನೀತಿಸಂಹಿತೆ ನೆಪದಲ್ಲಿ ಶಾಸಕರ ಬಂಧನಕ್ಕೆ ಮುಂದಾಗಿರೋದು ತಪ್ಪು. ಪ್ರತಿಭಟನೆ ನಡೆಸಿದ್ದಕ್ಕಾಗಿ ಅವರನ್ನು ಬಂಧಿಸುವುದು ಹೋರಾಟ ಹತ್ತಿಕ್ಕುವ ಕೆಲಸ. ಕಾರ್ಯಕರ್ತರಿಗೆ ಆಗುತ್ತಿರುವ ನೋವು, ದಬ್ಬಾಳಿಕೆ ನೋಡಿ ಹರೀಶ್ ಪೂಂಜಾ ಉದ್ವೇಗದಿಂದ ಕೆಲವು ಮಾತುಗಳನ್ನಾಡಿದ್ದಾರೆ. ಇದನ್ನೇ ನೆಪ ಇಟ್ಕೊಂಡು ನಮ್ಮ ಶಾಸಕರನ್ನ ಬಂಧಿಸಿದರೆ ಹೋರಾಟ ಮಾಡಬೇಕಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಪೊಲೀಸರೇ ಕುಮ್ಮಕ್ಕು ಕೊಡುತ್ತಿದ್ದಾರೆ. ಪೊಲೀಸರು ಕೂಡಲೇ ಕಾರ್ಯಕರ್ತರ ಮೇಲಿನ ಎಫ್ಐಆರ್ ವಾಪಸ್ ಪಡೆಯಬೇಕು. ಶಾಸಕರ ಬಂಧನ ಪ್ರಯತ್ನವನ್ನು ನಿಲ್ಲಿಸಬೇಕು. ಗೃಹ ಸಚಿವರು ತಕ್ಷಣ ಪೊಲೀಸ್ ವರಿಷ್ಠರ ಜೊತೆಗೆ ಮಾತನಾಡಿ ದಬ್ಬಾಳಿಕೆಯನ್ನು ನಿಲ್ಲಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
ಯಾರೋ ರಾಜಕೀಯ ಪುಡಾರಿಗಳ ಒತ್ತಡಕ್ಕೆ ಮಣಿದು ಎಫ್ಐಆರ್ ಹಾಕಿದ್ದಾರೆ, ಇದು ಸರಿಯಲ್ಲ. ನಮ್ಮ ಕಾರ್ಯಕರ್ತರ ಮೇಲೆ ವಿನಾಕಾರಣ ಎಫ್ಐಆರ್ ಹಾಕಿ ರಾತ್ರೋರಾತ್ರಿ ಬಂಧಿಸಿದ್ದಾರೆ. ಕಾರ್ಯಕರ್ತರ ಬಂಧಿಸಿದ್ದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜಾ ಉದ್ವೇಗದಲ್ಲಿ ಮಾತಾಡಿದ್ದಾರೆ. ಹರೀಶ್ ಪೂಂಜಾ ಮಾತಾಡಿದ್ದರ ಹಿಂದೆ ಯಾವುದೇ ದುರುದ್ದೇಶ ಇಲ್ಲ. ಇದನ್ನೇ ನೆಪ ಮಾಡಿಕೊಂಡು ಪೊಲೀಸರು ದಬ್ಬಾಳಿಕೆ ನಡೆಸೋದು ಸರಿಯಲ್ಲ. ಶಾಸಕರನ್ನು ಬಂಧಿಸುವಂತಹ ದುಸ್ಸಾಹಸಕ್ಕೆ ಕೈಹಾಕಿದರೆ ಸುಮ್ಮನಿರಲ್ಲ ಎಂದು ಹೇಳಿದರು.
ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿಗೆ ಪರಿಷತ್ ಟಿಕೆಟ್ ಕೊಡದಂತೆ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ''ಯಡಿಯೂರಪ್ಪ ಅವರು ಹಿರಿಯರು, ನಾಲ್ಕು ಗೋಡೆಗಳ ಮಧ್ಯೆ ಸಲಹೆ ಕೊಟ್ಟಿದ್ದಾರೆ. ಇಂದು ಸಂಜೆ ಕೋರ್ ಕಮಿಟಿ ಸಭೆ ಇದೆ. ಅಭ್ಯರ್ಥಿಗಳು ಯಾರಾಗಬೇಕು ಅಂತ ಎಲ್ಲರ ಸಲಹೆ, ಅಭಿಪ್ರಾಯ ಪಡೆದು ತೀರ್ಮಾನ ಮಾಡಲಾಗುತ್ತದೆ. ಈಗ ಯಾವುದೇ ಚರ್ಚೆ ಮಾಡುವುದಿಲ್ಲ ಎಂದರು.
Another FIR has been registered against BJP MLA Harish Poonja from Belthangadi. Another case has been registered against the MLA on the allegation of threatening the Belthangady police station by protesting without permission. On 20th of this month, MLA Harish Poonja protested in front of Belthangadi taluk office. A case was registered against Harish Poonja two days ago on the charge of threatening the police during the protest.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am