ಬ್ರೇಕಿಂಗ್ ನ್ಯೂಸ್
22-05-24 08:15 pm HK News Desk ಕರ್ನಾಟಕ
ಶಿವಮೊಗ್ಗ, ಮೇ 23: ಡಾ.ಧನಂಜಯ ಸರ್ಜಿ ಅವರ ವೈದ್ಯ ವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿರುವುದರಿಂದ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
ನೈರುತ್ಯ ಪದವೀದರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ವಾಸವಿ ಕಲ್ಯಾಣ ಮಂಟಪದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸೊರಬ ಮಂಡಲ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರ ಗೆಲುವಿಗಾಗಿ ಎಲ್ಲ ಮುಖಂಡರು , ಕಾರ್ಯಕರ್ತರು ಒಂದಾಗಿ ಶ್ರಮಿಸೋಣ ಎಂದರು.
ಈ ಹಿಂದೆ ಬಿಜೆಪಿಯಲ್ಲಿದ್ದು ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ ಕೇಳುತ್ತಿದ್ದಾರೆಂದರೆ ಕಳೆದ ಪರಿಷತ್ ಚುನಾವಣೆಯಲ್ಲಿ ಹಿಂದೆ ಮತ ನೀಡಿದ ಪದವೀಧರ ಮತದಾರರನ್ನು ತಿರಸ್ಕರಿಸಿದ್ದಾರೆ ಎಂದರ್ಥ ಎಂದು ಟೀಕಿಸಿದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಉಸಿರಿರುತ್ತೆ, ಹೆಸರಿರೋದಿಲ್ಲ, ಸಾಯುವಾಗ ಹೆಸರಿರುತ್ತೆ ಉಸಿರಿರೋದಿಲ್ಲ. ಈ ಉಸಿರು ಮತ್ತು ಹೆಸರಿನ ನಡುವೆ ಇರುವ ಜೀವನ ಮತ್ತು ಕಾಲವನ್ನು ನಾವು ಸಾಧನೆ ಮಾಡುವ ಮೂಲಕ, ನಿಸ್ವಾರ್ಥ ಸಮಾಜ ಸೇವೆ ಮೂಲಕ ಸಾರ್ಥಕ ಗಳಿಸಿಕೊಳ್ಳಬೇಕು. ಜನಸೇವೆ ಮಾಡಬೇಕೆಂಬ ತುಡಿತದಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ, ವಿಧಾನ ಪರಿಷತ್ ಪ್ರವೇಶಿಸಿ ಪದವೀಧರರ ಸೇವೆ ಮಾಡುವ ಅವಕಾಶವನ್ನು ತಾವೆಲ್ಲರೂ ಮಾಡಿಕೊಡಬೇಕೆಂದು ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಂಡಲ ಅಧ್ಯಕ್ಷರಾದ ಪ್ರಕಾಶ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್.ದತ್ತಾತ್ರಿ ಅವರು ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಓಬಿಸಿ ಮೋರ್ಚಾದ ಅಧ್ಯಕ್ಷ ಎಂ.ಡಿ. ಉಮೇಶ್, ತಾಲ್ಲೂಕು ಮುಖಂಡರಾದ ದೇವೇಂದ್ರಪ್ಪ, ಮಂಡಲದ ಅಧ್ಯಕ್ಷರಾದ ಪ್ರಕಾಶಣ್ಣ ತಲಕಾಲಕೊಪ್ಪ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು ಮುಖಂಡರಾದ ಗೀತಾ ಮಲ್ಲಿಕಾರ್ಜುನ, ಗುರುಕುಮಾರ ಪಾಟೀಲ್, ಕೊಟ್ರೇಶ್ ಹಾಗೂ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಮುಖಂಡರು ಹಾಗೂ ಪದವೀಧರ ಕ್ಷೇತ್ರದ ಮತದಾರರು ಭಾಗವಹಿಸಿದ್ದರು.
Congress MLA Madhu Bangarappa bats for Dr Dhananjaya Sarji, says he's the right candidate in shivamogga for Vidhan Parishad electiona
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm