ಬ್ರೇಕಿಂಗ್ ನ್ಯೂಸ್
26-05-24 01:34 pm HK News Desk ಕರ್ನಾಟಕ
ಹಾಸನ, ಮೇ 26: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ಕಂಟೇನರ್ ಡಿಕ್ಕಿಯಾಗಿದ್ದು ಮಗು ಸಹಿತ ಆರು ಮಂದಿ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಬೆಳ್ಳಂಬೆಳಗ್ಗೆ ನಡೆದಿದೆ.
ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಮೂಲದವರು ಎಂದು ಗುರುತಿಸಲಾಗಿದೆ. ಡಿವೈಡರ್ ಡಿಕ್ಕಿ ಹೊಡೆದು ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಕಂಟೇನರ್ ಗೆ ಕಾರು ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು ಕಾರು ಪೂರ್ತಿ ನಜ್ಜುಗುಜ್ಜಾಗಿತ್ತು. ಇದರಿಂದಾಗಿ ಮೃತದೇಹಗಳನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರು ಮಹಿಳೆಯರು, ಇಬ್ಬರು ಪುರುಷರು, ಒಂದು ಮಗು ಸಾವನ್ನಪ್ಪಿದೆ. ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ,
ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಎಂದು ಗುರುತಿಸಲಾಗಿದೆ.






ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿದ್ದು ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಬಂದು ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕ ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿದ್ದರಿಂದ ಭೀಕರ ಅವಘಡ ಉಂಟಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಬಡಿದು ಹಾರಿದ್ದು ಕಂಟೇನರ್‌ಗೆ ಗುದ್ದಿದೆ.
Deadly accident in Hassan, six of family returning from Mangalore killed on spot. Six killed in deadly accident. Family are said to be from Devanahalli Bangalore. They came to visit family member who was admitted at hospital in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm