ಬ್ರೇಕಿಂಗ್ ನ್ಯೂಸ್
28-05-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 28: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆ, ಸರಣಿ ಹತ್ಯೆಗಳು, ಭ್ರಷ್ಟಾಚಾರ ಆರೋಪ ಹಾಗೂ ಅಭಿವೃದ್ಧಿ ವಿಚಾರವಾಗಿ ಹಿನ್ನಡೆಯನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಹೋರಾಟ ನಡೆಸಲಾಯಿತು.
ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಅಶ್ವತ್ಥ ನಾರಾಯಣ, ಡಿವಿ ಸದಾನಂದ ಗೌಡ, ಮುನಿರತ್ನ, ಬೈರತಿ ಬಸವರಾಜ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.



ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆದರೂ ಬ್ರ್ಯಾಂಡ್ ಬೆಂಗಳೂರಿಗೆ ಒಂದು ರೂಪಾಯಿ ಹಣ ನೀಡಿಲ್ಲ. ನಮ್ಮ ತೆರಿಗೆ ಎಂದು ನಮ್ಮ ಹಕ್ಕು ಎಂದು ಹೋರಾಟ ಮಾಡಿದರು. ಆದರೆ ಬೆಂಗಳೂರು ಜನರ ತೆರಿಗೆಯನ್ನು ಬೆಂಗಳೂರಿನ ಅಭಿವೃದ್ಧಿಗೆ ಬಳಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು
ಮಾಜಿ ಸಚಿವ ಮುನಿರತ್ನ ಮಾತನಾಡಿ, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರಲಿಲ್ಲ ಹಾಗೂ ಹಣವೂ ಇಲ್ಲ. ಸರ್ಕಾರದಿಂದ ನಯಾ ಪೈಸೆ ಬಿಡುಗಡೆ ಆಗ್ತಿಲ್ಲ. ಟೆಕ್ ಪಾರ್ಕ್ ಗಳಲ್ಲಿ ಐಟಿಯವರು ಕೆಲಸ ಬಿಟ್ಟು ಹೈದರಾಬಾದ್ ಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಶಾಸಕರ ಸಭೆ ಕರೆಯಲು ಸಾಧ್ಯವಾಗ್ತಿಲ್ಲ, ಯಾಕೆಂದರೆ ನಮ್ಮ ಪ್ರಶ್ನೆಗಳಿಗೆ ಅವರಲ್ಲಿ ಉತ್ತರ ಇಲ್ಲ ಎಂದರು.
ಗುತ್ತಿಗೆದಾರರು ನೇಣು ಹಾಕುವ ಪರಸ್ಥಿತಿ ನಿರ್ಮಾಣ ಆಗಿದೆ. ಮರ ಬಿದ್ದರು ಕಡಿದು ತೆರವು ಮಾಡಲು ಜನ ಸಿಗ್ತಿಲ್ಲ. ಬೆಂಗಳೂರು ಕಾಂಗ್ರೆಸ್ ಅಧಿಕಾರದ ಬೇರೆ ರಾಜ್ಯಗಳಿಗೆ ಎಟಿಎಂ ಆಗಿದೆ. ಬೆಂಗಳೂರಿನಲ್ಲಿ ಬರುವ ಅನುದಾನ ಗ್ಯಾರಂಟಿಗೆ ಬಳಕೆ ಮಾಡಲಾಗ್ತಿದೆ ಎಂದು ಆರೋಪಿಸಿದರು.
ಮಾಜಿ ಡಿಸಿಎಂ, ಡಾ ಅಶ್ವತ್ಥ ನಾರಾಯಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರನ್ನು ಕಡೆಗಣಿಸಿದೆ. ಕಾಂಗ್ರೆಸ್ ಸರ್ಕಾರದಲ್ಲಿ ರಕ್ತ ಹೀರಲಾಗ್ತಿದೆ. ಯಾವ ಗುತ್ತಿಗೆದಾರರು ಕೆಲಸ ಮಾಡಲು ಸಿದ್ದರಿಲ್ಲ. ಅಭಿವೃದ್ಧಿ ಕೆಲಸ ಶೂನ್ಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಸಂಪೂರ್ಣವಾಗಿ ಕುಸಿದಿದೆ ಎಂದು ವಾಗ್ದಾಳಿ ನಡೆಸಿದರು. ಸಿಎಂ ಹಾಗೂ ಡಿಸಿಎಂ ನಡುವಿನ ಜಗಳದಲ್ಲಿ ಬೆಂಗಳೂರು ಬಡವಾಗಿದೆ ಎಂದರು
ಸಂಸದ ಡಿವಿ ಸದಾನಂದ ಗೌಡರು ಮಾತನಾಡಿ, ಸರ್ಕಾರದ ಕಣ್ಣಿದ್ದೂ ಕುರುಡಾಗಿದೆ, ಕಿವಿ ಇದ್ದೂ ಕಿವುಡಾಗಿದೆ. ಮನೆಯಿಂದ ಹೊರಟ ಹೆಣ್ಣು ಮಗಳು, ಯುವಕ, ಹಿರಿಯರು ಮತ್ತೆ ಮನೆ ಸೇರುವ ಭರವಸೆ ಇಲ್ಲದಂತಾಗಿದೆ. ಅಧಿಕಾರಿಯ ಆತ್ಮಹತ್ಯೆ ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಸರ್ಕಾರಿ ಅಧಿಕಾರಿಗಳು ಆತಂಕದಿಂದ ದಿನ ದೂಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಗುಂಡಿ ಮುಚ್ಚದಿದ್ದರೆ,ಭ್ರಷ್ಟಾಚಾರ ನಿಲ್ಲಿಸದೇ ಇದ್ದರೆ ಉಗ್ರ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದರು.
The BHARATIYa Janata Party (BJP) on Monday launched a massive protest against the Congress government in the state, citing law and order problems, serial killings, corruption allegations and development issues. Opposition leader R Ashoka, Ashwath Narayan, DV Sadananda Gowda, Munirathna, Byrathi Basavaraj and others participated in the protest held at Freedom Park in the city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm