ಬ್ರೇಕಿಂಗ್ ನ್ಯೂಸ್
30-05-24 06:41 pm HK News Desk ಕರ್ನಾಟಕ
ಮೈಸೂರು, ಮೇ.30: ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಮಹಿಳಾ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಹಣ ಪಡೆಯುವಾಗ ಸಬ್ ಇನ್ಸ್ಪೆಕ್ಟರ್ ರಾಧಾ ಸಿಕ್ಕಿಬಿದ್ದಿದ್ದಾರೆ. ರಾಧಾ ಅವರನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರುವುದಾಗಿ ಲೋಕಾಯುಕ್ತ ಅಧೀಕ್ಷಕರು ತಿಳಿಸಿದ್ದಾರೆ. ಮೈಸೂರಿನ ಕೆ ಆರ್ ಮೊಹಲ್ಲಾ ನಿವಾಸಿಯಾದ ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಎಂಬುವರು ಮೇ 13 ರಂದು ಮೈಸೂರು ಲೋಕಾಯುಕ್ತ ಠಾಣೆಗೆ ಹಾಜರಾಗಿ ನೀಡಿದ ದೂರಿನ ಆಧಾರದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಕುವೆಂಪು ನಗರದ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ತಮಗೆ ಸೇರಿದ ಚಿನ್ನಾಭರಣ, ಆಸ್ತಿ, ಬ್ಯಾಂಕ್ ಪಾಸ್ ಬುಕ್, ಲಾಕರ್ ಕೀ, ಕಾರ್ ಸೇರಿದಂತೆ ಇತರ ಸೊತ್ತನ್ನು ಕುವೆಂಪುನಗರದ ಮಹಿಳಾ ಸಬ್ ಇನ್ಸ್ಪೆಕ್ಟರ್ ರಾಧಾ ವಶಕ್ಕೆ ಪಡೆದುಕೊಂಡಿದ್ದರು. ಈ ವಸ್ತುಗಳನ್ನ ವಾಪಸ್ ಕೊಡಲು ಎರಡು ಲಕ್ಷ ಹಣ ನೀಡುವಂತೆ ಸಬ್ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎಂದು ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಕಾರ್ಯಾಚರಣೆ ಕೈಗೊಂಡಾಗ ಪೊಲೀಸ್ ಠಾಣೆಯಲ್ಲಿ ಮಹೇಶ್ ಅವರಿಂದ ಸಬ್ ಇನ್ಸ್ಪೆಕ್ಟರ್ ರಾಧಾ 50 ಸಾವಿರ ರೂ. ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ ಠಾಕೂರ್ ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಸುಬ್ರಹ್ಮಣ್ಣೇಶ್ವರರಾವ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕರಾದ ಸಜೀತ್ ವಿ.ಜೆ ಅವರ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಇಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Mysuru police inspector Radha arrested by Lokayukta while accepting bribe of 1 lakh. Radha was a Sub Inspector of police working at Kuvempunagara.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm