ಬ್ರೇಕಿಂಗ್ ನ್ಯೂಸ್
31-05-24 03:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 31: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಯ ಪರವಾಗಿ ಪೊಲೀಸ್ ಠಾಣೆ ಒಳಗೆ ಪ್ರತಿಭಟನೆ ನಡೆಸಿದ್ದಲ್ಲದೆ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ.
ಪೊಲೀಸರ ವಿರುದ್ಧ ನಿಂದನೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್ ಗಳನ್ನು ರದ್ದುಪಡಿಸಲು ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ, ಶಾಸಕರ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ ಉತ್ತರ ಕಂಡುಕೊಳ್ಳಬಹುದು. ಆದರೆ, ಜನಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆಯ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು, ಪೊಲೀಸರನ್ನು ನಿಂದಿಸುವುದು ಎಷ್ಟು ಸರಿ? ಅಲ್ಲದೆ, ಶಾಸಕರು ಕಾನೂನು ರಚಿಸುವ ಹೊಣೆಯನ್ನು ಹೊಂದಿರುವುದು. ಅದರ ಬದಲು ನ್ಯಾಯಾಲಯ ಮಾಡುವ ಕೆಲಸಕ್ಕೆ ಮುಂದಾಗುವುದು ಎಷ್ಟು ಸರಿ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.
ಪ್ರತಿ ತಾಲೂಕಿನಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಿದ್ದಾರೆ, ಅವರೇ ಮಾಡಲಿ. ನ್ಯಾಯಾಲಯದ ಕಾರ್ಯವನ್ನು ನೀವು ಮಾಡುವುದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ ಏನಿದೆ, ಅದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಮಾಡುವುದಕ್ಕೆ ಬಿಡಿ ಎಂದು ಪೀಠ ಶಾಸಕ ಪೂಂಜಾ ಪರವಾಗಿ ಹಾಜರಾಗಿದ್ದ ವಕೀಲರಿಗೆ ಸಲಹೆ ನೀಡಿದೆ.
ಪ್ರಸಕ್ತ ದಿನಗಳಲ್ಲಿ ಪೊಲೀಸರ ವಿರುದ್ಧ ಧರಣಿ ಮಾಡುವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಕೆಲಸ ಮಾಡುವುದಾದರೂ ಹೇಗೆ ಎಂದು ಪೀಠ ಇದೇ ವೆಳೆ ಪ್ರಶ್ನೆ ಮಾಡಿತು.
ಜನಪ್ರತಿನಿಧಿಯಾದ ವ್ಯಕ್ತಿ ಯಾವನೋ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಕ್ಕೆ ಪೊಲೀಸ್ ಠಾಣೆಗೆ ಹೋಗುವುದು ಎಷ್ಟು ಸರಿ. ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿದ್ದಾರೆ. ಅಮಾಯಕರಾದ ಅವರನ್ನು ಪೊಲೀಸರು ಬಂದಿಸಿದ್ದಾರೆ ಎಂದರೆ ತಕ್ಷಣ ಜನಪ್ರತಿನಿಧಿ ಪೊಲೀಸ್ ಠಾಣೆಗೆ ಹೋಗಲು ಸಾಧ್ಯವೇ.. ನೀವು ಠಾಣೆಗೆ ಹೋಗಬಾರದಾಗಿತ್ತು ಎಂದು ತಿಳಿಸಿತು.
ಯಾವುದೇ ವ್ಯಕ್ತಿಯನ್ನು ಬಂಧಿಸಿದಲ್ಲಿ ಅದನ್ನು ಕಾನೂನು ಪ್ರಕಾರ ಪ್ರಕ್ರಿಯೆ ನಡೆಸಬೇಕು. ಅದಕ್ಕೆ ಬದಲಾಗಿ ಶಾಸಕರಾದವರು ಠಾಣೆಗೆ ಹೋದರೆ ಪೊಲೀಸರು ತಮ್ಮ ಸೇವೆ ಸಲ್ಲಿಸುವುದು ಹೇಗೆ? ಎಂದು ಪೀಠ ಖಾರವಾಗಿ ಪ್ರಶ್ನಿಸಿತು.
ಈ ರೀತಿಯ ಪ್ರಕರಣದಲ್ಲಿ ಯಾವುದೇ ನ್ಯಾಯಾಲಯ ಆರೋಪಿ ಪರವಾಗಿ ಆದೇಶ ಮಾಡಿರುವ ನಿದರ್ಶನ ಇದ್ದರೆ ಹೇಳಿ. ಭಾರತದ ಯಾವುದೇ ನ್ಯಾಯಾಲಯ ಅಥವಾ ವಿದೇಶದ ನ್ಯಾಯಾಲಯಗಳು ಈ ಬಗ್ಗೆ ಆದೇಶ ನೀಡಿರುವ ಉದಾಹರಣೆ ಇದೆಯೇ? ಇದ್ದರೆ ಸಲ್ಲಿಸಿ. ಅದರ ಆಧಾರದಲ್ಲಿ ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಪೀಠ ತಿಳಿಸಿತು.
ವಾದ ಆಲಿಸಿದ ಪೀಠ, ಸರಕಾರಕ್ಕೆ ನೋಟಿಸ್ ಜಾರಿ ಮಾಡಿತು. ಅಲ್ಲದೆ, ಮುಂದಿನ ವಿಚಾರಣೆಯ ವರೆಗೆ ಸಾವಧಾನದಿಂದ ಇರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗಬೇಡಿ ಎಂದು ಸೂಚಿಸಿತು.
Mangalore High court drills Belthangady MLA Harish Poonja over threatening police officer. Says don’t do the work or the court, do whatever you are supposed to do as a MLA the court slammed.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 03:01 pm
Mangalore Correspondent
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm