ಬ್ರೇಕಿಂಗ್ ನ್ಯೂಸ್
31-05-24 06:36 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 31: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಕ್ಕೆ ಕ್ಷಣಗಣನೆ ಶುರುವಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಥಳುಕು ಹಾಕ್ಕೊಂಡಿರುವ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವಂತೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಪ್ರಕರಣ ಸರ್ಕಾರದ ಮುಖಭಂಗಕ್ಕೆ ಕಾರಣವಾಗಬಾರದೆಂದು ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಸೂಚನೆ ಬಂದಿದೆ ಎನ್ನಲಾಗುತ್ತಿದೆ. ಒಂದೆಡೆ ಯೂನಿಯನ್ ಬ್ಯಾಂಕ್ ಅಧ್ಯಕ್ಷರು ಪ್ರಕರಣದ ಬಗ್ಗೆ ತನಿಖೆಗೆ ಸಿಬಿಐಗೆ ಪತ್ರ ಬರೆದಿರುವುದರಿಂದ ತನಿಖೆ ಬಹುತೇಕ ಕೇಂದ್ರೀಯ ತನಿಖಾ ಸಂಸ್ಥೆಗೆ ಹೋಗುವ ಸಾಧ್ಯತೆಯಿದೆ.
ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಧಿಕಾರಿಯ ಆತ್ಮಹತ್ಯೆ ಹಾಗೂ ಅದರ ಪರಿಣಾಮಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸರ್ಕಾರಕ್ಕೆ ಮುಖಭಂಗವಾಗಬಾರದು, ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ನಾಗೇಂದ್ರಗೆ ಖುದ್ದು ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿದ್ದ 187 ಕೋಟಿ ಹಣವನ್ನು ಬ್ಯಾಂಕ್ ಅಧಿಕಾರಿಗಳ ಮೂಲಕ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿದ್ದು ಸಚಿವ ನಾಗೇಂದ್ರ ಸೂಚನೆಯಂತೆ ಈ ಕೆಲಸ ಮಾಡಲಾಗಿತ್ತು ಎಂದು ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಡೆತ್ ನೋಟ್ ನಲ್ಲಿ ಬರೆದಿದ್ದರು. ಈ ವಿಚಾರ ದೇಶಾದ್ಯಂತ ಸಂಚಲನ ಉಂಟು ಮಾಡಿದ್ದು ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ.
As speculation over the continuation of Minister for Scheduled Tribes Welfare B. Nagendra in the Cabinet persisted, with the demand for his resignation raised by the BJP in connection with the ₹94-crore scam at the Maharshi Valmiki Scheduled Tribes Development Corporation, his Cabinet colleagues came to his defence on Thursday. BJP workers staged a dharna in front of the Chief Minister’s residence here seeking the Minister’s resignation.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm