ಬ್ರೇಕಿಂಗ್ ನ್ಯೂಸ್
01-06-24 10:40 pm HK News Desk ಕರ್ನಾಟಕ
ಗದಗ/ರಾಮನಗರ, ಜೂ 01: ಸಾಲಬಾಧೆಗೆ ಓರ್ವ ಯುವ ರೈತ ಸೇರಿ ಇಬ್ಬರು ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಸಂದಿಗವಾಡದಲ್ಲಿ ಕ್ರಿಮಿನಾಶಕ ಸೇವಿಸಿ ರೈತ ಶಂಕರಪ್ಪ ಬೆಳಹಾರ (60) ಸಾವಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ ಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದರು.
ಜತೆಗೆ ಸ್ಥಳೀಯ ಸಾರ್ವಜನಿಕರೊಂದಿಗೆ ಕೈಗಡವನ್ನೂ ಪಡೆದುಕೊಂಡಿದ್ದರು. ಸಾಲವನ್ನು ತೀರಿಸಲಾಗಿದೆ ಪ್ರತಿನಿತ್ಯವೂ ಪರದಾಡುತ್ತಿದ್ದರು. ಹೀಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡ ರೈತ ಕ್ರಿಮಿನಾಶಕ ಸೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಪಿ.ಹಳ್ಳಿ ದೊಡ್ಡಿ ಗ್ರಾಮದಲ್ಲಿ ಯುವ ರೈತ ದರ್ಶನ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಕಾಂ ಓದುತ್ತಿದ್ದ ಈತ ತಂದೆ ಜೊತೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ. ತನ್ನ ತಂದೆ ಕೃಷ್ಣ ಅವರ ಜೊತೆಗೂಡಿ ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆದು ಬೇಸಾಯ ಮಾಡುತ್ತಿದ್ದರು. ಬಿಸಿಲಿನ ತೀವ್ರತೆಗೆ ಮಾವಿನ ಫಸಲು ಕೈಕೊಟ್ಟ ಪರಿಣಾಮ ಸಾಲಬಾಧೆ ಹೆಚ್ಚಾಗಿತ್ತು. ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿದ್ದಾರೆ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karnataka Two farmers commit suicide after loss in field due to heavy heat of the sun. Unable to pay the bank loan two farmers of diffrent districts in state have committed suicide.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm