ಬ್ರೇಕಿಂಗ್ ನ್ಯೂಸ್
01-06-24 11:08 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪ ಎದುರಿಸುತ್ತಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಮತ್ತು ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದ್ದು, ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ್ ಬರೆದಿದ್ದರು. ಅಲ್ಲದೆ, ಇಬ್ಬರು ಅಧಿಕಾರಿಗಳ ಹೆಸರನ್ನೂ ಬರೆದಿದ್ದರು.
ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ. ಹೀಗಾಗಿ ಸಿಬಿಐ ಅಧಿಕಾರಿಗಳೂ ತನಿಖೆ ನಡೆಸುವ ಸಾಧ್ಯತೆಯಿದೆ. ನೂರು ಕೋಟಿಗೂ ಹೆಚ್ಚು ಅವ್ಯವಹಾರ ಆಗಿದ್ದರೆ, ಸಹಜವಾಗಿಯೇ ಪ್ರಕರಣ ಸಿಬಿಐಗೆ ಹೋಗಲಿದೆ. ಆದರೆ ರಾಜ್ಯ ಸರ್ಕಾರ ಸಿಬಿಐಗೆ ವಹಿಸುವ ಪ್ರಶ್ನೆ ಇಲ್ಲ, ನಾವೇ ಎಸ್ಐಟಿ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಇದೇ ವೇಳೆ, ಎಸ್ಐಟಿ ತನಿಖೆಯಲ್ಲಿ ಸಚಿವ ನಾಗೇಂದ್ರ ಹೆಸರು ಪ್ರಸ್ತಾಪವಾದರೆ ರಾಜಿನಾಮೆ ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಬಂಧಿತ ಅಧಿಕಾರಿಗಳು ಬಾಯಿ ಬಿಟ್ಟರೆ ಬಹುತೇಕ ನಾಗೇಂದ್ರ ಚಾಪ್ಟರ್ ಕ್ಲೋಸ್ ಆಗಲಿದೆ.
The Special Investigation Team (SIT) probing the Valmiki Development Corporation (VDC) scam has taken into custody its managing director Padmanabha and corporation's accounts officer Parashuram.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm