ಬ್ರೇಕಿಂಗ್ ನ್ಯೂಸ್
02-06-24 01:19 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 2: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂನ್ 13ರಂದು ನಡೆಯುವ ಚುನಾವಣೆಗೆ ಬಿಜೆಪಿಯಿಂದ ಮಾಜಿ ಸಚಿವ ಸಿ.ಟಿ ರವಿ, ಪರಿಷತ್ ಹಾಲಿ ಸದಸ್ಯ ಎನ್.ರವಿಕುಮಾರ್ ಹಾಗೂ ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ. ಮುಳೆ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಬಿಜೆಪಿಯಿಂದ ಆಯ್ಕೆಗೊಳ್ಳುವ ಮೂರು ಸ್ಥಾನಗಳಿಗೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ವಿಧಾನಸಭೆಯಲ್ಲಿ ಸೋಲು ಕಂಡವರು, ಸಂಸತ್ ಟಿಕೆಟ್ ವಂಚಿತರು ಪರಿಷತ್ತಿಗೆ ಆಯ್ಕೆಗೊಳ್ಳಲು ಕಸರತ್ತು ನಡೆಸಿದ್ದರು. ಸಂಸದ ನಳಿನ್ ಕುಮಾರ್, ಮಂಡ್ಯ ಸಂಸದೆ ಸುಮಲತಾ, ಸಿಟಿ ರವಿ, ಜೆಸಿ ಮಾಧುಸ್ವಾಮಿ ಸೇರಿದಂತೆ ಹಲವರು ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿದ್ದರು. 15ಕ್ಕೂ ಹೆಚ್ಚು ಹೆಸರುಗಳನ್ನು ರಾಜ್ಯ ಘಟಕದಿಂದ ಕೇಂದ್ರಕ್ಕೆ ಕಳಿಸಿಕೊಡಲಾಗಿತ್ತು.
ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಸಿಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಸುಮಲತಾ ಅವರಿಗೆ ಪರಿಷತ್ ಸ್ಥಾನ ಸಿಗಬಹುದೆಂದು ಊಹಿಸಲಾಗಿತ್ತು. ಪರಿಷತ್ತಿನಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿರುವ ಎನ್.ರವಿಕುಮಾರ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದು ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಬಿಜೆಪಿಯಿಂದ ವಿಧಾನಸಭೆ ಸದಸ್ಯ ಲೆಕ್ಕಾಚಾರದಲ್ಲಿ ಮೂರು ಸ್ಥಾನಗಳನ್ನಷ್ಟೆ ಗೆಲ್ಲಲು ಸಾಧ್ಯವಿದೆ. ಬಿಜೆಪಿಗೆ 66 ಸದಸ್ಯ ಬಲ ಇರುವುದರಿಂದ ಮೂವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಒಂದು ಸ್ಥಾನ ಗೆಲ್ಲಲು 19 ಸದಸ್ಯರ ಮತಗಳ ಅಗತ್ಯವಿದೆ.
ಮಂಡ್ಯದಲ್ಲಿ ಟಿಕೆಟ್ ವಂಚಿತೆಯಾಗಿದ್ದ ಸುಮಲತಾ ಮತ್ತು ದಕ್ಷಿಣ ಕನ್ನಡದಲ್ಲಿ ಟಿಕೆಟ್ ಕಳಕೊಂಡಿದ್ದ ನಳಿನ್ ಕುಮಾರ್ ದೆಹಲಿ ಮಟ್ಟದಲ್ಲಿ ತೀವ್ರ ಲಾಬಿ ನಡೆಸಿದ್ದರು. ಪಕ್ಷದ ವಲಯದಲ್ಲಿ ಸುಮಲತಾಗೆ ಟಿಕೆಟ್ ಸಿಗಬಹುದು ಎನ್ನುವ ಲೆಕ್ಕಾಚಾರ ಇತ್ತು. ಆದರೆ ಕೊನೆಕ್ಷಣದಲ್ಲಿ ಸಿಟಿ ರವಿ ಜೊತೆಗೆ ಬೆಳಗಾವಿ ಮೂಲದ ಎಂ.ಜಿ. ಮುಳೆ ಲಕ್ ಹೊಡೆದಿದ್ದಾರೆ.
The Bharatiya Janata Party (BJP) nominated three members for the upcoming Karnataka Legislative Council elections on Sunday (2 June). Former Minister in the Yediyurappa government, C T Ravi, incumbent MLC N Ravikumar and former MLA M G Mule, a Maratha are the chosen ones.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm