ಬ್ರೇಕಿಂಗ್ ನ್ಯೂಸ್
04-06-24 11:39 am Bangalore Correspondent ಕರ್ನಾಟಕ
ಬೆಂಗಳೂರು, ಜೂ 04: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಮತಎಣಿಕೆಯ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮತಗಳ ಅಂತರದಲ್ಲಿ ಮುನ್ನುಗ್ಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರು 1 ಲಕ್ಷ 24 ಸಾವಿರದ 943 ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ಗೆಲುವು ಬಹುತೇಕ ಪಕ್ಕಾ ಎನ್ನಲಾಗಿದೆ. ಡಾ.ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ.
ಪ್ರತಿ ಸುತ್ತಿನಲ್ಲೂ ಅಂತರ ಹೆಚ್ಚಿಸಿಕೊಂಡ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ತಮ್ಮ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕನಕಪುರ ಹೊರತುಪಡಿಸಿ ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರಿಗೆ 7 ವಿಧಾನಸಭಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕೇವಲ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಮುನ್ನಡೆ ಸಾಧಿಸಿದ್ದಾರೆ.
ಲೋಕಸಭಾ ಕ್ಷೇತ್ರದಲ್ಲಿ ಹಿನ್ನೆಡೆಯ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ ಸುರೇಶ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಚರ್ಚಿಸಿದ್ದಾರೆ.
ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಇದೀಗ ಡಿ.ಕೆ. ಸುರೇಶ್ ವಿರುದ್ಧ ಡಾ. ಮಂಜುನಾಥ್ ದೊಡ್ಡ ಮಟ್ಟದ ಮುನ್ನಡೆ ಕಾಯ್ದುಕೊಂಡಿದ್ದಾರೆ.
Election result, Dr Manjunath leading, DK Suresh faces heavy shock, police security tightened at Bangalore rural. BJP’s Dr CN Manjunath Leading By 72,000 Votes Against DK Suresh In Bengaluru Rural Constituency
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm