ಬ್ರೇಕಿಂಗ್ ನ್ಯೂಸ್
05-06-24 10:36 am HK News Desk ಕರ್ನಾಟಕ
ಚಿಕ್ಕಬಳ್ಳಾಫುರ, ಜೂ 05: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಡಾ.ಕೆ ಸುಧಾಕರ್ ಗೆಲುವು ಪಡೆದ ಹಿನ್ನೆಲೆಯಲ್ಲಿ ಶಾಸಕರ ಮನೆ ಮೇಲೆ ಕಲ್ಲು ತೂರಾಟ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಅವರ ನಿವಾಸ ನಗರದ ಕಂದವಾರದಲ್ಲಿದೆ. ಯಾರೋ ಕಿಡಿಗೇಡಿಗಳು ರಾತ್ರಿ ವೇಳೆ ಬಂದು ಮನೆ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ. ಇದರಿಂದ ಶಾಸಕರ ಮನೆಯ ಕಿಟಕಿಗಳ ಗಾಜುಗಳು ಒಡೆದು ಹೋಗಿವೆ.
ಘಟನೆಯಲ್ಲಿ ಮನೆಯ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿದೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಶಾಸಕರ ನಿವಾಸದ ಬಳಿ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ರಾತ್ರಿ 10 ಗಂಟೆ 30 ನಿಮಿಷದ ಸುಮಾರಿಗೆ ಘಟನೆ ನಡೆದಿದೆ.
ನಿನ್ನೆ ಇಡೀ ದೇಶದ ಲೋಕಸಭಾ ಚುನಾವಣೆಯ ಫಲಿತಾಂಶ ಬಂದಿದ್ದು ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೇ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೂಡ 9 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಇದರಲ್ಲಿ ಚಿಕ್ಕಬಳ್ಳಾಪುರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ.ಕೆ ಸುಧಾಕರ್ 95 ಸಾವಿರ ಮತಗಳಿಂದ ಭರ್ಜರಿ ಗೆಲುವು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಮನೆಯ ಮೇಲೆ ಕಲ್ಲು ತೂರಾಟ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.
ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ. ಯಾಕೆಂದರೆ ಸ್ವತಃ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಅದು ಈಗ ಮತ್ತೆ ಮುನ್ನೆಲೆಗೆ ಬಂದಿದೆ.
ಅದಲ್ಲದೇ ಬಿಜೆಪಿ ನಾಯಕ ಪ್ರತಾಪ್ ಸಿಂಹ ಕೂಡ ಶೀಘ್ರದಲ್ಲೇ ಪ್ರದೀಪ್ ಈಶ್ವರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರು ಮಾತನಾಡಿರುವ ವಿಡಿಯೋ ತುಣುಕನ್ನು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ ಕೆ ಸುಧಾಕರ್ ಅವರು ಒಂದು ಮತದ ಮುನ್ನಡೆಯನ್ನು ಪಡೆದರು ಕೂಡ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದ್ದರು.
Chikkaballapur Miscreants pelt stone on MLA pradeep eshwar house after Dr Sudhakar major victory in lok sabha elections 2024.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm