ಬ್ರೇಕಿಂಗ್ ನ್ಯೂಸ್
04-12-20 06:12 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.4 : ಮರಾಠ ಅಭಿವೃದ್ಧಿ ನಿಗಮವನ್ನು ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಬೆಂಬಲಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 15 ಸಾವಿರ ಪೊಲೀಸರನ್ನು ರಾಜಧಾನಿಯಲ್ಲಿ ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಹೀಗಾಗಿ, 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಪೊಲೀಸರು ಎಲ್ಲಾ ಕಡೆ ಗಸ್ತು ತಿರುಗಲಿದ್ದಾರೆ. 5 ಜನ ಹೆಚ್ಚುವರಿ ಕಮಿಷನರ್ ದರ್ಜೆಯ ಅಧಿಕಾರಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ. ಇದುವರೆಗೂ ಬೆಂಗಳೂರಿನಲ್ಲಿ ಕರ್ನಾಟಕ ಬಂದ್ಗೆ ಯಾರೂ ನಮ್ಮ ಬಳಿ ಅನುಮತಿ ಕೇಳಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.


ಮುಂಜಾಗ್ರತಾ ಕ್ರಮವಾಗಿ 35 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ನೀಡುವುದಿಲ್ಲ. ಕರ್ನಾಟಕ ಬಂದ್ಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬೆಂಬಲ ಸೂಚಿಸಿಲ್ಲ. ಹೀಗಾಗಿ, ಆ ಬಸ್ಗಳನ್ನು ತಡೆಯುವ ಹಾಗೆ ಇಲ್ಲ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಮಾಮೂಲಿನಂತೆ ಸಂಚರಿಸಲಿವೆ ಎಂದಿದ್ದಾರೆ.

ಇನ್ನು ಆಯಾ ವಿಭಾಗದ ಡಿಸಿಪಿಗಳಿಗೆ ಬಂದ್ನ ನಿರ್ವಹಣೆಯ ಹೊಣೆ ವಹಿಸಲಾಗಿದೆ. 300 ಪೊಲೀಸ್ ವ್ಯಾನ್ಗಳು ನಗರದಾದ್ಯಂತ ವಿಶೇಷ ಗಸ್ತು ನಡೆಸಲಿದೆ. ಯಾರೂ ಕೂಡ ಭಯ ಪಡುವ ಅಗತ್ಯ ಇಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳನ್ನು ಮಾಡಿಕೊಳ್ಳಬೇಕು. ಯಾರು ಕೂಡ ಪ್ರತಿಭಟನೆಗೆ ಹಾಗೂ ಮೆರವಣಿಗೆಗೆ ಅನುಮತಿ ಕೋರಿಲ್ಲ. ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
Karnataka Bandh Over 15,000 police personnel will be deployed across the city to watch out for protests said Bangalore Commission, Kamal Pant.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am