ಬ್ರೇಕಿಂಗ್ ನ್ಯೂಸ್
06-06-24 03:44 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6: ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿಸಿ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಮಾತನ್ನು ಸ್ವತಃ ಸಚಿವ ನಾಗೇಂದ್ರ ಸ್ಪಷ್ಟಪಡಿಸಿಲ್ಲ. ಸುದ್ದಿಗೋಷ್ಟಿ ಕರೆದು ಎಲ್ಲವನ್ನೂ ಹೇಳ್ತೀನಿ ಎಂದಿದ್ದಾರೆ. ಆದರೆ, ಈ ಬಗ್ಗೆ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷಕ್ಕೆ ಮುಜುಗರ ಆಗಬಾರದು ಅಂತ ನಾಗೇಂದ್ರ ಅವರೇ ರಾಜಿನಾಮೆ ನೀಡಿದ್ದಾರೆ. ನಾವೇನೂ ರಾಜಿನಾಮೆ ಕೇಳಿರಲಿಲ್ಲ ಎಂದಿದ್ದಾರೆ.
ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬೆನ್ನಲ್ಲೇ ನಾಗೇಂದ್ರ ರಾಜಿನಾಮೆ ನೀಡಿದ್ದಾರೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಆಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.
ಅತ್ತ ಪ್ರಕರಣದಲ್ಲಿ ತನಿಖೆ ಮುಂದುವರಿಸಿರುವ ಎಸ್‌ಐಟಿ ಅಧಿಕಾರಿಗಳು ಸಚಿವ ನಾಗೇಂದ್ರ ಆಪ್ತರಾದ ಉದ್ಯಮಿ ನಾಗರಾಜು ನೆಕ್ಕಂಟಿ ಹಾಗೂ ನಾಗೇಶ್ವರ್ ರಾವ್ ಎಂಬವರನ್ನು ಬುಧವಾರ ಬಂಧಿಸಿದ್ದರು. ಇದರೊಂದಿಗೆ ಬಂಧಿತರ ಸಂಖ್ಯೆ ಐದಕ್ಕೇರಿತ್ತು. ಅತ್ತ ಬಹುಕೋಟಿ ರೂಪಾಯಿ ಹಗರಣ ಆಗಿರುವುದರಿಂದ ಸಿಬಿಐ ಅಧಿಕಾರಿಗಳು ತನಿಖೆ ಎತ್ತಿಕೊಂಡಿದ್ದರು.
ವಾಲ್ಮೀಕಿ ನಿಗಮದ ಖಾತೆಯಿಂದ 94 ಕೋಟಿ ರೂ. ಹೈದರಾಬಾದ್‌ನ ಖಾತೆಗಳಿಗೆ ಸಂದಾಯ ಆಗಿತ್ತು. ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಸೊಸೈಟಿಗೆ ವರ್ಗಾಯಿಸಿರುವ ಸಂಚಿನಲ್ಲಿ ಬಳ್ಳಾರಿ ಮೂಲದ ನಾಗರಾಜು, ನಾಗೇಶ್ವರ ರಾವ್ ಪಾತ್ರ ದೃಢಪಟ್ಟಿದೆ. ಹೀಗಾಗಿ, ಇಬ್ಬರನ್ನೂ ಬಂಧಿಸಿ ಹೆಚ್ಚಿನ ವಿಚಾರಣೆಗಾಗಿ ಏಳು ದಿನ ಕಸ್ಟಡಿಗೆ ಪಡೆಯಲಾಗಿದೆ.
ಹಗರಣದ ಪ್ರಧಾನ ಆರೋಪಿ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿ 18 ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ 94 ಕೋಟಿ ರೂ. ಹಣವನ್ನು ವರ್ಗಾಯಿಸಿ ಡ್ರಾ ಮಾಡಿದ್ದಾನೆ. ಈ ಹಣ ಎಲ್ಲಿ ಹೋಗಿದೆ ಎಂಬುದರ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಜತೆಗೆ, ಸತ್ಯನಾರಾಯಣ ಹಾಗೂ ಇತರ ಆರೋಪಿಗಳ ನಂಟಿನ ರಹಸ್ಯ ಭೇದಿಸಲಾಗುತ್ತಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪೂರ್ವ ವಲಯದ ಡೆಪ್ಯುಟಿ ಜನರಲ್ ಮ್ಯಾನೇಜರ್ ಜೆ ಮಹೇಶ್ ನೀಡಿದ ದೂರಿನ ಅನ್ವಯ ಎಂಜಿ ರಸ್ತೆಯ ಶಾಖೆಯ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್, ಉಪ ವ್ಯವಸ್ಥಾಪಕಿ ಡಿ ದೀಪಾ, ಅಧಿಕಾರಿ ವಿ ಕೃಷ್ಣ ಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.
Karnataka Deputy Chief Minister D K Shivakumar on Thursday said Minister B Nagendra has offered to resign, following allegations against him in connection with an illegal money transfer case, and indicated that he may quit the Siddaramaiah Cabinet later in the day.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm