ಬ್ರೇಕಿಂಗ್ ನ್ಯೂಸ್
06-06-24 05:26 pm HK News Desk ಕರ್ನಾಟಕ
ಮೈಸೂರು, ಜೂನ್.6: ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ದಾಖಲಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಭ್ಯರ್ಥಿ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು ಕಂಡಿದ್ದಾರೆ.
ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರವಾಗಿ 10823 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ 6201 ಮತ ಚಲಾವಣೆಯಾಗಿದೆ. ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ 84 ಮತ ಪಡೆದಿದ್ದಾರೆ. 4622 ಮತಗಳ ಭಾರೀ ಅಂತರದಿಂದ ವಿವೇಕಾನಂದ ಜಯ ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 1049 ಅಸಿಂಧು ಮತಗಳೆಂದು ಚುನಾವಣೆ ಅಧಿಕಾರಿ ಘೋಷಿಸಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ವ್ಯಾಪ್ತಿಗೆ ಸೇರಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 20549 ಇತ್ತು. ಈ ಪೈಕಿ 18979 ಮತದಾರರು ಮತ ಚಲಾವಣೆ ಮಾಡಿದ್ದು 88.07% ಮತದಾನ ಆಗಿತ್ತು.
ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರಿನಲ್ಲಿ ಲೋಕಸಭೆ ಫಲಿತಾಂಶ ಬೆನ್ನಲ್ಲೇ ಮತ್ತೊಂದು ಸೋಲಿನ ಶಾಕ್ ಕಾಂಗ್ರೆಸಿಗೆ ಸಿಕ್ಕಿದೆ. ವಿಶೇಷ ಅಂದ್ರೆ, ಜೆಡಿಎಸ್ನಲ್ಲಿ ಇದೇ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮರಿತಿಬ್ಬೇಗೌಡ ಇತ್ತೀಚೆಗಷ್ಟೇ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಅಲ್ಲದೆ, ಕಾಂಗ್ರೆಸ್ ಕಡೆಯಿಂದ ಸೀಟು ಗಿಟ್ಟಿಸಿಕೊಂಡಿದ್ದರು. ಇದೀಗ ಶಿಕ್ಷಕ ಮತದಾರ ಜೆಡಿಎಸ್- ಬಿಜೆಪಿ ಕೈಹಿಡಿದಿದ್ದು ಸಿದ್ದರಾಮಯ್ಯ ಮತ್ತು ಮರಿತಿಬ್ಬೇಗೌಡರಿಗೆ ಸೋಲಿನ ರುಚಿ ಕಾಣಿಸಿದ್ದಾರೆ. ಆಮೂಲಕ ಗ್ಯಾರಂಟಿ ಏನೂ ಚುನಾವಣೆ ಮೇಲೆ ಎಫೆಕ್ಟ್ ಆಗಿಲ್ಲವೆಂದು ಸಾರಿದ್ದಾರೆ.
CM Siddaramaiah home town Mysuru leads with JDS candidate Vivekananda going lead in Council elections. Counting of biennial polls for the Karnataka Legislative Council - from South Teachers, South West Teachers and SW Graduates constituencies - is underway at Maharani's Science College on JLB Road, in Mysuru, on Thursday.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm