ಬ್ರೇಕಿಂಗ್ ನ್ಯೂಸ್
08-06-24 02:20 pm HK News Desk ಕರ್ನಾಟಕ
ಮೈಸೂರು, ಜೂನ್.8: ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಬಿಜೆಪಿಯವರು ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿದ್ದರು. ಜನರು ಅವರನ್ನು ಬೆಂಬಲಿಸಿದ್ದಾರೆ. ಹೀಗಾಗಿ ಈ ಗ್ಯಾರಂಟಿಯನ್ನು ನಿಲ್ಲಿಸೋದೆ ಒಳಿತು ಎಂದು ಮೈಸೂರು ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ.ಲಕ್ಷ್ಮಣ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. ಶೇಕಡಾ 70% ರಷ್ಟು ಮೇಲ್ವರ್ಗದವರು ಈ ಯೋಜನೆಯಲ್ಲಿ ಫಲಾನುಭವಿಗಳಗಿದ್ದಾರೆ. ಆದರೆ ಚುನಾವಣೆಯಲ್ಲಿ ಜನರು ಕಾಂಗ್ರೆಸನ್ನು ತಿರಸ್ಕಾರ ಮಾಡಿದ್ದಾರೆ. ಬೆಂಜ್ ಕಾರ್ ಹೊಂದಿರುವವನು, 25 ಸಾವಿರ ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ರೀ ಲುಕ್ ಮಾಡುವ ಅಗತ್ಯ ಇದೆ. ಇದಕ್ಕೆ ಉದಾಹರಣೆ ಎಂದರೆ ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600 ಕ್ಕೂ ಹೆಚ್ಚು ಮತ ನೀಡಿದ್ರೆ, ನನಗೆ ಕೇವಲ ಮೂರು, ಏಳು ಮತಗಳನ್ನ ನೀಡಿದ್ದಾರೆ. ಒಕ್ಕಲಿಗರು ಕೂಡ ನನಗೆ ಮತ ಹಾಕಿಲ್ಲ ಕೆಪಿಸಿಸಿ ವಕ್ತಾರರೂ ಆಗಿರುವ ಎಂ. ಲಕ್ಷ್ಮಣ್ ಅಸಮಾಧಾನ ಹೊರ ಹಾಕಿದ್ದಾರೆ.


ಮತದಾರರು ಸ್ಯಾಡಿಸ್ಟ್ ಇದ್ದಾರೆ..!
ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದ್ರೆ ಸಿದ್ದರಾಮಯ್ಯ ಏನ್ ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ ? ಮತದಾರರಲ್ಲಿ ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ ಎಂದು ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ರು. ಎಲ್ಲಿಗಾದ್ರೂ ಐದು ರೂಪಾಯಿ ಕೊಟ್ಟಿದ್ರಾ? ಆದ್ರೆ ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ. ಜಯದೇವ ಆಸ್ಪತ್ರೆ ಸೇರಿದಂತೆ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದ್ರೂ ಇದ್ದಾರಾ ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದ್ರೆ ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟು ಬಾರಿ ನೋವು ಕೊಡ್ತೀರಿ ಎಂದು ಮತದಾರರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
People don't like the Congress guarantee. They have shown that through the result. The BJP was talking against our guarantee. People have supported him. Therefore, it is better to discontinue this guarantee," said M. Lakshman, the defeated Congress candidate from Mysuru constituency.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm