ಬ್ರೇಕಿಂಗ್ ನ್ಯೂಸ್
12-06-24 01:14 pm HK News Desk ಕರ್ನಾಟಕ
ಮೈಸೂರು, ಜೂನ್ 12: ಯುವಕನ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಮೈಸೂರಿನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ವಿಚಾರದಲ್ಲಿ ಅರಣ್ಯ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ.
ದರ್ಶನ್ ವಿರುದ್ಧ ಅರಣ್ಯ ಇಲಾಖೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಹಿಂದೆಯೇ ಎಫ್ ಐ ಆರ್ ದಾಖಲಿಸಿದ್ದು ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಐದು ಬಾರಿ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೆ ದರ್ಶನ್ ನಿರ್ಲಕ್ಷ್ಯ ವಹಿಸಿದ್ದರು. ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಪ್ರಾಪರ್ಟಿ ಮ್ಯಾನೇಜರ್ ವಿರುದ್ಧ ದೂರು ದಾಖಲಾಗಿತ್ತು.
ಈಗ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರುತ್ತಿದ್ದಂತೆ ಹಳೆ ಪ್ರಕರಣ ಮೈಗೆ ಬಿದ್ದುಕೊಂಡಿದೆ. ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ದರ್ಶನ್ ತೋಟ ಹೊಂದಿದ್ದು ನಿಷೇಧಿತ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದರು. ಪ್ರಕರಣ ದಾಖಲಾಗಿದ್ದರೂ ತನಿಖಾಧಿಕಾರಿ ವರ್ಗಾವಣೆಯಾದ ಬಳಿಕ ಯಾವುದೇ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಬೇಕಿದ್ದರೂ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸಿದ್ದರು.
ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರವಾಗಿದೆ. ದರ್ಶನ್ ಸೆಲೆಬ್ರಿಟಿ ಆಗಿದ್ದರಿಂದ ಹಾಗೆಯೇ ಬಿಟ್ಟಿದ್ದರು. ದರ್ಶನ್ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸಿಲ್ಲ ಎಂದು ಅಧಿಕಾರಿಗಳ ಸಬೂಬು ಹೇಳಿಕೊಂಡು ಬಂದಿದ್ದರು. ಈಗ ಬಾಡಿ ವಾರೆಂಟ್ ಪಡೆದು ವಿಚಾರಣೆಗೆ ಕರೆದೊಯ್ಯುವ ಅವಕಾಶ ಇದ್ದು ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಾರೋ ಅನ್ನುವ ಕುತೂಹಲ ಇದೆ.
Noted Kannada actor, who was arrested on Tuesday and sent to six days of police custody on murder charges, also faces a wildlife case. An FIR was filed against Darshan Thoogudeepa in January 2023 for housing four bar-headed goose in his farmhouse in T. Narasipura in Mysuru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm