ಬ್ರೇಕಿಂಗ್ ನ್ಯೂಸ್
13-06-24 05:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 13: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಂಧನ ಭೀತಿ ಎದುರಾಗಿದೆ. ಪೋಕ್ಸೋ ಪ್ರಕರಣದಲ್ಲಿ ಬೆಂಗಳೂರಿನ 1ನೇ ಹೆಚ್ಚುವರಿ ತ್ವರಿತ ನ್ಯಾಯಾಲಯವು ಯಡಿಯೂರಪ್ಪ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿದೆ. ಹೀಗಾಗಿ ಪೊಲೀಸರು ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆಯಿದೆ.
ಬೆಂಗಳೂರಿನ ಮಹಿಳೆಯೊಬ್ಬರು ಕಳೆದ ಫೆಬ್ರವರಿ 2ರಂದು ಸಹಾಯ ಕೇಳಿ ಯಡಿಯೂರಪ್ಪ ಬಳಿಗೆ ತೆರಳಿದ್ದರು. ಈ ವೇಳೆ, ತನ್ನ ಅಪ್ರಾಪ್ತ ಮಗಳನ್ನೂ ಕರೆದೊಯ್ದಿದ್ದು, ಆ ಸಂದರ್ಭದಲ್ಲಿ ಯಡಿಯೂರಪ್ಪ ತನ್ನ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಹೇಳಿ ಮಹಿಳೆ ಸದಾಶಿವ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಮಾರ್ಚ್ 14ರಂದು ಚುನಾವಣೆ ಘೋಷಣೆ ಆಗೋದಕ್ಕೂ ಮೊದಲೇ ಈ ಬಗ್ಗೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಐಡಿಗೆ ಹಸ್ತಾಂತರ ಮಾಡಿದ್ದರೆ, ಇತ್ತ ಆ ಮಹಿಳೆ ದಿಢೀರ್ ಆಗಿ ಸಾವಿಗೀಡಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಆಕೆ ಖಾಸಗಿ ಆಸ್ಪತ್ರೆಯಲ್ಲಿ ಮೇ 26ರಂದು ಸಾವು ಕಂಡಿದ್ದರು.
ಪ್ರಕರಣ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಎಪ್ರಿಲ್ 12ರಂದು ಯಡಿಯೂರಪ್ಪ ಅವರನ್ನು ಕರೆಸಿ ವಿಚಾರಣೆ ನಡೆಸಿದ್ದರು. ಈ ವೇಳೆ, ಮಹಿಳೆ ಮಾನಸಿಕ ಅಸ್ವಸ್ಥೆ. ದೊಡ್ಡ ನಾಯಕರ ವಿರುದ್ಧ ದೂರು ನೀಡುವುದು ಆಕೆಗೆ ಚಾಳಿ ಎಂದು ಹೇಳಿಕೆ ನೀಡಿದ್ದರು. ಆದರೆ ಚುನಾವಣೆ ಕಳೆದು ಫಲಿತಾಂಶ ಪ್ರಕಟವಾದ ಬಳಿಕ ಮೃತ ಮಹಿಳೆಯ ಸೋದರನ ಮೂಲಕ ಬೆಂಗಳೂರಿನ ಕೋರ್ಟಿಗೆ ರಿಟ್ ಅರ್ಜಿ ಹಾಕಿದ್ದು, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು ದಾಖಲಾಗಿ ಕೆಲವು ತಿಂಗಳು ಕಳೆದರೂ ಪೊಲೀಸರು ಬಂಧನ ಕ್ರಮ ಮಾಡಿಲ್ಲ. ಅವರ ಬಂಧನಕ್ಕೆ ಆದೇಶ ಕೊಡಿಸಬೇಕು ಎಂದು ಕೋರಿದ್ದರು. ಕೋರ್ಟ್ ಇಂದು (ಜೂನ್ 13) ವಿಚಾರಣೆ ನಡೆಸಿದ್ದು, ಆರೋಪಿ ಬಂಧನಕ್ಕೆ ವಾರೆಂಟ್ ಜಾರಿ ಮಾಡಿದೆ. ಇದೇ ವೇಳೆ, ಹೈಕೋರ್ಟಿನಲ್ಲಿ ಪ್ರಕರಣ ರದ್ದುಪಡಿಸಲು ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಜೂನ್ 14ರ ಶುಕ್ರವಾರ ವಿಚಾರಣೆಗೆ ಬರಲಿದೆ.
ಇತ್ತ ಯಡಿಯೂರಪ್ಪ ಯಾರ ಕೈಗೂ ಸಿಗದೆ ತಲೆಮರೆಸಿಕೊಂಡಿದ್ದು, ಬೇರೆ ರಾಜ್ಯದಲ್ಲಿ ಅಡಗಿದ್ದಾರೆ ಎನ್ನಲಾಗುತ್ತಿದೆ. ಪೋಕ್ಸೋ ಕೇಸು ಗಂಭೀರ ಪ್ರಕರಣ ಆಗಿರುವುದರಿಂದ ಬಂಧನ ಆಗುತ್ತಾರೆಂದೇ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದೆ. ಆದರೆ, ಇದರ ಹಿಂದೆ ಯಡಿಯೂರಪ್ಪ ಮೇಲೆ ಟಾರ್ಗೆಟ್ ಮಾಡಿ ದೂರು ಕೊಡಿಸಲಾಗಿದೆ, ಈಗ ಮಹಿಳೆ ಪರವಾಗಿ ಯಾರೋ ಪ್ರಭಾವಿಗಳೇ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ ಎನ್ನುವ ವಾದವೂ ಕೇಳಿಬರುತ್ತಿದೆ. ಮಹಿಳೆಯ ಜೊತೆಗಿದ್ದ ಅಪ್ರಾಪ್ತ ಬಾಲಕಿಯನ್ನು ಮುಟ್ಟಿದ ಮಾತ್ರಕ್ಕೆ ಲೈಂಗಿಕ ಕಿರುಕುಳವೆಂದು ದೂರು ನೀಡಿರುವುದು ಮತ್ತು ಅದನ್ನು ಪೋಕ್ಸೋ ಕಾಯ್ದೆಯಡಿ ರಿಜಿಸ್ಟರ್ ಮಾಡುವಂತೆ ಪ್ರಭಾವಿಗಳೇ ಒತ್ತಡ ಹೇರಿ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.
Former Chief Minister B.S. Yediyurappa Yediyurappa is facing the threat of arrest. The 1st Additional Fast Track Court in Bengaluru has issued an arrest warrant against Yediyurappa in the POCSO case. The police are likely to arrest Yediyurappa at any moment.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm