ಬ್ರೇಕಿಂಗ್ ನ್ಯೂಸ್
13-06-24 08:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಕನ್ನಡ ಚಿತ್ರರಂಗದ ನಟ ದರ್ಶನ್ ಭಾಗಿಯಾಗಿದ್ದಾರೆ ಎನ್ನಲಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ ಹೊತ್ತಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎ1 ಆರೋಪಿಯಾಗಿ ಪವಿತ್ರಾ ಗೌಡರನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಇದರ ಬೆನ್ನಲ್ಲೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ. ಕೇಸ್ ಪ್ರಾರಂಭದಿಂದ ಕಾಮಾಕ್ಷಿಪಾಳ್ಯದ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರು ತನಿಖಾಧಿಕಾರಿ ಆಗಿದ್ದರು.
ಆದರೆ ಗಿರೀಶ್ ನಾಯ್ಕ್ ಅವರ ಬದಲಿಗೆ ಇಂದಿನಿಂದ ಎಸಿಪಿ ಚಂದನ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದಾರೆ. ಇನ್ಮುಂದೆ ಎಸಿಪಿ ಚಂದನ್ ಅವರ ಸೂಚನೆಯಲ್ಲೇ ರೇಣುಕಾಸ್ವಾಮಿ ಕೊಲೆ ಕೇಸ್ ಮುಂದೆ ಸಾಗಲಿದೆ. ಗಿರೀಶ್ ಅವರ ಬದಲಿಗೆ ಚಂದನ್ ನೇಮಕದ ಮುಖ್ಯ ಕಾರಣವೆಂದರೆ, ಚುನಾವಣೆ ಹಿನ್ನೆಲೆಯಲ್ಲಿ ಇನ್ಸ್ಪೆಕ್ಟರ್ ಗಿರೀಶ್ ನಾಯ್ಕ್ರನ್ನ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಈಗ ಚುನಾವಣೆ ಎಲ್ಲ ಮುಗಿದಿದ್ದರಿಂದ 2 ದಿನಗಳ ಹಿಂದೆಯೇ ಪುನಃ ತಮ್ಮ ಠಾಣೆಗೆ ಮರಳಬೇಕು ಎಂದು ಆದೇಶ ಬಂದಿತ್ತು. ಇದರಿಂದಾಗಿ ತನಿಖಾಧಿಕಾರಿಯನ್ನು ಚೇಂಜ್ ಮಾಡಲಾಗಿದೆ. ಮುಂದಿನ ತನಿಖೆಯ ದೃಷ್ಟಿಯಿಂದ ತನಿಖಾಧಿಕಾರಿಯನ್ನ ಬದಲಾವಣೆ ಮಾಡಲಾಗಿದೆ.
ಪ್ರಕರಣವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದ ಗಿರೀಶ್ ನಾಯ್ಕ್, ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಒಟ್ಟು 14 ಜನರನ್ನು ಬಂಧಿಸಿ ಕೇಸ್‌ಅನ್ನು ಸಮರ್ಥವಾಗಿ ನಡೆಸುತ್ತಿದ್ದರು. ಇದೀಗ ಗಿರೀಶ್ ನಾಯ್ಕ್ ಸಿ.ಕೆ ಅಚ್ಚುಕಟ್ಟು ಠಾಣೆಗೆ ವಾಪಸ್ ಹಿನ್ನಲೆಯಲ್ಲಿ ವಿಜಯನಗರ ಉಪವಿಭಾಗ ಎಸಿಪಿ ಚಂದನ್ ನೂತನ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
Actor Darshan murder case, investigating officer Girish Naik who without any fear daringly arrested actor Darshan is now been transferred. ACP chandan is now appointed as new officer in this murder case.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm