ಬ್ರೇಕಿಂಗ್ ನ್ಯೂಸ್
13-06-24 08:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.13: ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿವಿಧ ಆರೋಗ್ಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ನೂತನ ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನ ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನ ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅನೀಲ್ ಕುಮಾರ್, ಎನ್.ಎಚ್.ಎಮ್ ಎಂಡಿ ನವೀನ್ ಭಟ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರಿಗೆ ಸಚಿವರು ಸೂಚಿಸಿದರು.

15ನೇ ಹಣಕಾಸಿನಲ್ಲಿ ಆರೋಗ್ಯ ಯೋಜನೆಗಳ ಸ್ಥಿತಿ ಗತಿಗಳ ಕುರಿತು ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಚಿವರು, ಯೋಜನೆಗಳ ಶೀಘ್ರ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ವಿಳಂಬ ನೀತಿಯನ್ನ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ದುರಸ್ತಿ ಕಾರ್ಯಗಳು, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಸಿಗುವ ಅನುದಾನವನ್ನು ಸಂಪೂರ್ಣ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
254 public places including bus stands to have namma clinic says health minister Dinesh Gundu Rao.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm