ಬ್ರೇಕಿಂಗ್ ನ್ಯೂಸ್
17-06-24 06:08 pm HK News Desk ಕರ್ನಾಟಕ
ಶಿವಮೊಗ್ಗ, ಜೂನ್.17: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದಾಗಲೇ ಬಿಜೆಪಿ ಹಿರಿಯ ಮುಖಂಡ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ. ಭಾನುಪ್ರಕಾಶ್ (69) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಬಿಜೆಪಿ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಭಾನುಪ್ರಕಾಶ್ ಬಳಿಕ ಕಾರ್ಯಕರ್ತರ ಜೊತೆಗೆ ಭಜನೆ ಹಾಡುತ್ತಿದ್ದರು. ರಘುಪತಿ ರಾಘವ ರಾಜಾರಾಮ್ ಹಾಡುತ್ತಿದ್ದಾಗಲೇ ತಲೆ ಸುತ್ತಿ ಬಂದ ರೀತಿ ಕುಸಿದು ಬಿದ್ದಿದ್ದು ಕೂಡಲೇ ಅವರಿಗೆ ನೀರು ಕುಡಿಸಿ ಪಕ್ಕದ ಖಾಸಗಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಪ್ರತಿಭಟನೆ ಮುಗಿಸುವ ಹಂತಕ್ಕೆ ಬಂದಿದ್ದಾಗಲೇ ಘಟನೆ ನಡೆದಿದ್ದು ಹಿರಿಯ ಆರೆಸ್ಸೆಸ್ ಮುಖಂಡರೂ ಆಗಿದ್ದ ಭಾನುಪ್ರಕಾಶ್ ಕುಸಿದು ಬಿದ್ದಿದ್ದರಿಂದ ಆತಂಕಗೊಂಡರು.
ಆಸ್ಪತ್ರೆಗೆ ಒಯ್ದು ವೈದ್ಯರು ತಪಾಸಣೆ ಮಾಡುವಷ್ಟರಲ್ಲಿ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ಅಣಕು ಶವಯಾತ್ರೆಯಲ್ಲೂ ಪಾಲ್ಗೊಂಡಿದ್ದ ಭಾನುಪ್ರಕಾಶ್ ಸಾವು ಕಾರ್ಯಕರ್ತರಲ್ಲಿ ದಿಗ್ಭ್ರಮೆ ಮೂಡಿಸಿದೆ.
2009 ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಅವರು, 2013-19 ರ ಅವಧಿಯಲ್ಲಿ ಎಂಎಲ್ ಸಿಯಾಗಿದ್ದರು. ಪಕ್ಷ ಸಂಘಟನೆಯಲ್ಲಿ ಅವರ ಕೊಡುಗೆ ಅಪಾರವಿದ್ದು, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ಬಿಜೆಪಿಯಿಂದ ಭಾನುಪ್ರಕಾಶ್ ಸ್ಪರ್ಧಿಸಿ ಗಮನ ಸೆಳೆದಿದ್ದರು.
BJP leader and former MLC M B Bhanuprakash (69) died of cardiac arrest while staging a protest against the Congress government over the rise in prices of petrol and diesel at Seenappa Setty circle in the city on Monday.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm