ಬ್ರೇಕಿಂಗ್ ನ್ಯೂಸ್
18-06-24 05:43 pm HK News Desk ಕರ್ನಾಟಕ
ಕಾರವಾರ, ಜೂನ್ 18: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನನ್ನು ಎನ್ಐಎ ಅಧಿಕಾರಿಗಳು ಶಿರಸಿಯಲ್ಲಿ ಬಂಧಿಸಿದ್ದಾರೆ. ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್ಐಎ ತಂಡ ದಾಳಿ ನಡೆಸಿ ಯುವಕನನ್ನು ಬಂಧಿಸಿದೆ.
ಅಬ್ದುಲ್ ಶಕೂರ್(32) ಬಂಧಿತ ಯುವಕ. ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಕೆಲ ದಿನಗಳ ಹಿಂದಷ್ಟೇ ಬಕ್ರೀದ್ ಆಚರಣೆಗಾಗಿ ದಾಸನಕೊಪ್ಪಕ್ಕೆ ಬಂದಿದ್ದ. ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸರ ಸಹಕಾರದಿಂದ ಯುವಕನನ್ನು ಎನ್ಎಐ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಯುವಕ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಆಗಿದ್ದು, ಸಂಘಟನೆ ನಿಷೇಧ ಬಳಿಕ ದುಬೈನಲ್ಲಿ ಕೆಲಸ ಮಾಡುತ್ತಿದ್ದ. ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ, ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರೆ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ ಈತನ ಮೇಲಿದೆ.
ಆನ್ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಪಾಸ್ಪೋರ್ಟ್ ನಕಲಿ ದಾಖಲೆ ನೀಡಿದ ಆರೋಪವೂ ಈತನ ಮೇಲಿದೆ, ಸದ್ಯ ಆರೋಪಿಗೆ ನೋಟೀಸ್ ನೀಡಿ ಗುಪ್ತ ಸ್ಥಳದಲ್ಲಿ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
NIA arrests one from sirsi in Karwar over links with terror. The arrested has been identified as Abdul Shakur. NIA officials have arrested a young man in Shirsi on charges of being in contact with a terrorist organization and posting provocative posts on social media. Shirsi taluk was accused of posting a post to create communal hatred
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm