ಬ್ರೇಕಿಂಗ್ ನ್ಯೂಸ್
18-06-24 06:32 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.18: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ACMM ವಿಶೇಷ ನ್ಯಾಯಾಲಯ ಜೂನ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜೂನ್ 12 ರಂದು ಆತನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಜೂನ್ 18 ರವರೆಗೆ ಅವರನ್ನು ವಶಕ್ಕೆ ನೀಡಿತ್ತು. 33 ವರ್ಷದ ಪ್ರಜ್ವಲ್ ರೇವಣ್ಣ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು.
ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗತ್ತೆ ಪ್ಲೀಸ್ ಬೇಡ !
ಈ ವೇಳೆ ಮತ್ತೊಮ್ಮೆ ಪುರುಷತ್ವ ಪರೀಕ್ಷೆಗೆ ಮನವಿ ಮಾಡಿರುವುದ್ದಕ್ಕೆ ಪ್ರಜ್ವಲ್ ರೇವಣ್ಣ ನ್ಯಾಯಾಲಯದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. "ನಾನು ಎರಡು ಪ್ರಕರಣದಲ್ಲಿ ಒಪ್ಪಿಕೊಂಡು ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗುತ್ತೆ. ಈಗಾಗಲೇ ಎರಡು ಕೇಸ್‌ನಲ್ಲಿ ಪುರುಷತ್ವ ಪರೀಕ್ಷೆ ಆಗಿದೆ ಎಂದು ನ್ಯಾಯಾಧೀಶರ ಮುಂದೆ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದನ್ನು ಕೇಳಿ ನ್ಯಾಯಾಧೀಶರು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಇನ್ನು, ಸಿಐಡಿಯಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣದಲ್ಲಿ ಎಸ್‌ಐಟಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವನ್ನು ಕಸ್ಟಡಿಗೆ ಪಡೆಯಲು ಚಿಂತಿಸುತ್ತಿದೆ. ಇತ್ತೀಚೆಗೆ 3 ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಎಸ್‌ಐಟಿ ಮತ್ತೆ ಪ್ರಜ್ವಲ್ ರೇವಣ್ಣರನ್ನು ತಮ್ಮ ವಶಕ್ಕೆ ಪಡೆದಿತ್ತು.
ಮೇ 31 ರಂದು ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರೇವಣ್ಣನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಹಾಸನ ಚುನಾವಣೆ ನಡೆದ ಒಂದು ದಿನದ ನಂತರ ಅವರು ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದರು. ಕೇಂದ್ರೀಯ ತನಿಖಾ ದಳದ ಮೂಲಕ ಎಸ್‌ಐಟಿ ಕೋರಿಕೆಯ ಮೇರೆಗೆ ಇಂಟರ್‌ಪೋಲ್‌ನಿಂದ ಈ ಹಿಂದೆ ಆತನ ಇರುವಿಕೆಯ ಬಗ್ಗೆ ಮಾಹಿತಿ ಕೋರಿ 'ಬ್ಲೂ ಕಾರ್ನರ್ ನೋಟಿಸ್' ನೀಡಲಾಗಿತ್ತು.
The Bengaluru court on Tuesday extended judicial custody of sexual assault and rape accused suspended JDS leader Prajwal Revanna. The 42nd Additional Chief Metropolitan Magistrate (ACMM) special court for representatives pronounces the extension of his judicial custody.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm