ಬ್ರೇಕಿಂಗ್ ನ್ಯೂಸ್
23-06-24 10:25 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 23: ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಭಾನುವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ. ಈ ಮೂಲಕ ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ತಂದೆ, ಮಕ್ಕಳು ಸೇರಿ ಮೂವರು ಜೈಲಿಗೆ ಸೇರಿದಂತಾಗಿದೆ.
27 ವರ್ಷದ ಸಂತ್ರಸ್ತನ ಮೇಲೆ ಲೈಂಗಿಕ ದೌಜನ್ಯ ಎಸಗಿರುವ ಪ್ರಕರಣದಲ್ಲಿಆರೋಪಿ ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದ ಹೊಳೆನರಸೀಪುರ ಪೊಲೀಸರು ಕೋರಮಂಗಲದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಿವಾಸದಲ್ಲಿಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಹೀಗಾಗಿ, ಪೊಲೀಸರು ಆರೋಪಿ ಸೂರಜ್ ರೇವಣ್ಣ ಅವರನ್ನು ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.
ರಾಜ್ಯ ಸರ್ಕಾರದ ಆದೇಶದನ್ವಯ ಸೂರಜ್ ರೇವಣ್ಣ ವಿರುದ್ಧ ಪ್ರಕರಣದ ತನಿಖೆ ಜವಾಬ್ದಾರಿ ಸಿಐಡಿ ಹೆಗಲಿಗೇರಿದೆ. ಸಿಐಡಿ ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಬಾಡಿ ವಾರೆಂಟ್ ಸಲ್ಲಿಸುವ ಮೂಲಕ ಆರೋಪಿ ಸೂರಜ್ ರೇವಣ್ಣ ಅವರನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
ಹೊಳೆನರಸೀಪುರ ಪೊಲೀಸರಿಂದ ಕೇಸ್‌ನ ಕುರಿತು ಮಾಹಿತಿ ಪಡೆದು ಇದುವರೆಗಿನ ತನಿಖಾ ವರದಿ, ದಾಖಲೆಗಳನ್ನು ಪಡೆಯಲಾಗಿದೆ. ಅಧಿಕಾರಿಗಳ ಜತೆ ಚರ್ಚಿಸಿ ಹಲವು ಮಾಹಿತಿ ಪಡೆಯಲಾಗಿದೆ. ಡಿವೈಎಸ್ಪಿಯನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಸಿಐಡಿ ಮೂಲಗಳು ಹೇಳಿವೆ.

ಕೇಸ್ CID ಹೆಗಲಿಗೆ ;
ಇನ್ನು ಜೆಡಿಎಸ್ ನಾಯಕ, ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಕುರಿತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್. ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಖ್ಯೆ 92/2024 ಅನ್ನು ಮುಂದಿನ ತನಿಖೆಗಾಗಿ ತಕ್ಷಣದಿಂದಲೇ ಸಿಐಡಿಗೆ ವಹಿಸಲಾಗಿದೆ. ಪ್ರಕರಣವನ್ನು ತನಿಖೆಗಾಗಿ ಸಿಐಡಿಗೆ ವಹಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
Janata Dal-Secular (JD-S) MLC Suraj Revanna was sent to judicial custody for 14 days on Sunday in connection with an investigation into an alleged sexual assault.The Hassan police produced the JD-S legislator before the Magistrate in Bengaluru on Sunday evening after he was arrested earlier in the day. The case was transferred to the CID, Karnataka police, earlier in the day but the CID is yet to take over the case.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm