ಬ್ರೇಕಿಂಗ್ ನ್ಯೂಸ್
24-06-24 10:50 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದು ಅಂಗನವಾಡಿಯಲ್ಲೇ ಎಲ್ಕೆಜಿ, ಯುಕೆಜಿ ತರಗತಿ ಆರಂಭಿಸುವ ಚಿಂತನೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇತರೇ ಭಾಗಗಳಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಹೇಳಿದರು.
ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೂ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯಿಂದ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
The State government has now decided to constitute an expert committee to decide on the mode of providing pre-primary education — Early Child Care and Education (ECCE) — at anganwadi centres across the State, except in the Kalyana Karnataka region. This comes as a major relief for thousands of anganwadi workers across the State as they feared that these centres would be closed down if pre-primary classes were to be started at all government schools.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm