ಬ್ರೇಕಿಂಗ್ ನ್ಯೂಸ್
26-06-24 05:36 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.26: ಉದ್ಯಮಿ ರಾಕೇಶ್ ಶೆಟ್ಟಿ ಒಡೆತನದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿಯನ್ನು ತಕ್ಷಣವೇ ನಿಲ್ಲಿಸಬೇಕೆಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿವಿ ಕನ್ನಡ ಚಾನೆಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ ಆದೇಶ ಮಾಡಿದೆ.
ಈ ಕುರಿತು ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿದ್ದು ಪವರ್ ಟಿವಿ ಪ್ರಸಾರಕ್ಕೆ ತಡೆ ಹಾಕಿ ಆದೇಶ ಮಾಡಿದೆ.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ, ಸಂದೇಶ್ ಜಿ. ಚೌಟ ಹಾಗೂ ಡಿ.ಆರ್.ರವಿಶಂಕರ್, ‘ಪ್ರತಿವಾದಿ ರಾಕೇಶ್ ಶೆಟ್ಟಿ, ಅರ್ಜಿದಾರರ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ವಾಸ್ತವದಲ್ಲಿ ಇವರು ತಮ್ಮ ಚಾನೆಲ್ ಅನ್ನು ಕಾನೂನುಬಾಹಿರ ನಡೆಸುತ್ತಿದ್ದಾರೆ. 2021ರಿಂದಲೂ ಇವರು ಚಾನೆಲ್ ಪರವಾನಗಿಯನ್ನು ನವೀಕರಿಸಿಲ್ಲ ಎಂಬ ಅಂಶಗಳನ್ನು ವಿಸ್ತೃತವಾಗಿ ನ್ಯಾಯಪೀಠದ ಗಮನಕ್ಕೆ ತಂದರು.
ಸುದೀರ್ಘ ವಾದ ಆಲಿಸಿದ ನ್ಯಾಯಪೀಠ, ‘ಪ್ರತಿವಾದಿ ರಾಕೇಶ್ ಶೆಟ್ಟಿ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್‌ಗಳ (ನಿಯಂತ್ರಣ) ಕಾಯ್ದೆ–1995ರ ಆದೇಶವನ್ನು ಉಲ್ಲಂಘಿಸಿರುವ ಕಾರಣ ತಕ್ಷಣದಿಂದಲೇ ತಮ್ಮ ಚಾನೆಲ್‌ನಲ್ಲಿ ಸುದ್ದಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜುಲೈ 8ರ ಮುಂದಿನ ವಿಚಾರಣೆಯ ವರೆಗೆ ಪ್ರಸಾರ ಮಾಡಬಾರದು ಎಂದು ಪ್ರಕರಣದ ಪ್ರತಿವಾದಿ ಮೆಸರ್ಸ್ ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯ ಆಡಳಿತ ನಿರ್ದೇಶಕ ರಾಕೇಶ್ ಶೆಟ್ಟಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
License renewal issue, high court orders to stop broadcasting of Power TV Kannada of Rakesh shetty for deformation news against Devegowda and Family. Rakesh shetty Md and owner has been continuously telecasting derogatory news contest against family members of Kumaraswamy and Revanna.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm