ಬ್ರೇಕಿಂಗ್ ನ್ಯೂಸ್
26-06-24 07:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 26: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಆರೋಪಿಗಳು 700ಕ್ಕೂ ಹೆಚ್ಚು ಖಾತೆಗಳಿಗೆ 94 ಕೋಟಿ ಹಣವನ್ನು ವರ್ಗಾವಣೆ ಮಾಡಿ, ಡ್ರಾ ಮಾಡಿರುವುದನ್ನು ಪತ್ತೆ ಮಾಡಿದ್ದಾರೆ. ಹೈದರಾಬಾದ್ ನಲ್ಲಿ ಬಂಧಿತರಾಗಿರುವ ಸತ್ಯನಾರಾಯಣ ಶರ್ಮಾ ಮತ್ತು ಸಾಯಿತೇಜ್ ಅವರನ್ನು ತನಿಖೆ ನಡೆಸಿದಾಗ, ಹಣವನ್ನು ಬಳ್ಳಾರಿ, ಬೆಂಗಳೂರು ಭಾಗದ ನೂರಾರು ಮಂದಿಯ ಖಾತೆಗಳಿಗೆ ರವಾನಿಸಿರುವ ಮಾಹಿತಿ ನೀಡಿದ್ದಾರೆ.
ಹೈದರಾಬಾದಿನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋಪರೇಟಿವ್ ಎನ್ನುವ ಸಹಕಾರಿ ಸಂಸ್ಥೆಗೆ ವಾಲ್ಮೀಕಿ ನಿಗಮದ 94.73 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಹಕಾರಿ ಬ್ಯಾಂಕಿನಲ್ಲಿ ನಕಲಿ ಖಾತೆಗಳನ್ನು ಸಹಕರಿಸಿದ್ದ ಸತ್ಯನಾರಾಯಣ ಶರ್ಮಾ ಹಾಗೂ ದಾವಣಗೆರೆಯ ಚನ್ನಗಿರಿ ಮೂಲದ ಸಾಯಿತೇಜ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಿದ್ದು, ಅವರಿಂದ 14 ಕೋಟಿ ಹಣವನ್ನು ಜಪ್ತಿ ಮಾಡಲಾಗಿದೆ. 94 ಕೋಟಿ ಪೈಕಿ 5 ಕೋಟಿಯನ್ನು ನಿಗಮದ ಬ್ಯಾಂಕ್ ಖಾತೆಗೆ ವಾಪಸ್ ಮಾಡಲಾಗಿತ್ತು. ಉಳಿದ 89 ಕೋಟಿ ಮೊತ್ತವನ್ನು 700ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿಯಿದೆ. ಆ ಖಾತೆಗಳಿಗೆ ಹಣ ರವಾನಿಸಿದ್ದು ಯಾರು, ಹಣವನ್ನು ಡ್ರಾ ಮಾಡಿ ಯಾರಿಗೆ ತಲುಪಿಸಲಾಗಿದೆ ಎನ್ನುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಮಿಕರು ಸೇರಿದಂತೆ ಹಲವಾರು ಮಂದಿಯ ಖಾತೆಗಳಿಗೆ 5 ಲಕ್ಷದಿಂದ 2 ಕೋಟಿ ವರೆಗೂ ಹಣ ವರ್ಗಾವಣೆ ಆಗಿದೆ. ಬ್ಯಾಂಕ್ ಖಾತೆ ತೆರೆಯುವುದು, ಡ್ರಾ ಮಾಡುವುದು, ಹಣವನ್ನು ಪೂರೈಕೆ ಮಾಡುವುದರ ಹಿಂದೆ ಶರ್ಮಾ ಮತ್ತು ಸಾಯಿತೇಜ್ ಕೈವಾಡ ಹೊಂದಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.
The SIT officers investigating the Valmiki Development Corporation scam found that the accused had transferred and withdrawn Rs 94 crore to more than 700 accounts.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm