ಬ್ರೇಕಿಂಗ್ ನ್ಯೂಸ್
27-06-24 02:56 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 27: ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದರೆ ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆಯೊಂದು ನಡೆದಿದೆ.
ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು.
ಇನ್ನು ವೇದಿಕೆಯಲ್ಲಿ ಮಾತನಾಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದಲ್ಲಿ ಹಲವರು ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಇನ್ನೂ ಆ ಭಾಗ್ಯ ಸಿಕ್ಕಿಲ್ಲ. ಹಾಗಾಗಿ ಸಿಎಂ ಸಿದ್ದರಾಮಯ್ಯನವರೇ, ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.
ಅದಾಗಲೇ ನಿಮಗೆ ಸಿಎಂ ಆಗಿ ಕಾರ್ಯನಿರ್ವಹಿಸಿದ್ದೀರಿ. ಹೀಗಾಗಿ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ ಎಂದು ವೇದಿಕೆ ಮೇಲೆಯೇ ಚಂದ್ರಶೇಖರ ಸ್ವಾಮೀಜಿ ಬೇಡಿಕೆ ಇಟ್ಟಿರುವುದು ಸಿದ್ದರಾಮಯ್ಯ ಅವರ ಇರಿಸು ಮುರುಸಿಗೂ ಕಾರಣವಾಗಿತ್ತು.
ಸ್ವಾಮೀಜಿ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಹೇಳುವಾಗ ಸಿಎಂ ಹಾಗೂ ಡಿಸಿಎಂ ಅಕ್ಕಪಕ್ಕದಲ್ಲೆ ಮೌನವಾಗಿ ಕುಳಿತಿದ್ದರು.
ಬೆಂಗಳೂರನ್ನ ವಿಭಾಗ ಮಾಡುವುದು ಬೇಡ. ಉತ್ತರ ಕರ್ನಾಟಕ ಬೇರೆ ದಕ್ಷಿಣ ಕರ್ನಾಟಕ ಬೇರೆ ಅಂತ ಡಿವೈಡ್ ಮಾಡಿದರೆ ಅಭಿವೃದ್ಧಿ ಆಗಲ್ಲ ಹಾಗೆಯೆ ಬೆಂಗಳೂರು ವಿಭಾಗ ಮಾಡುವುದು ಬೇಡ ಎಮದು ಇದೇ ವೇಳೆ ಸ್ವಾಮೀಜಿ ಮನವಿ ಮಾಡಿಕೊಂಡರು.
Just weeks after the Lok Sabha elections, talks for change in the leadership in Karnataka have begun. A Vokkaliga seer has requested Siddaramaiah to step aside and let DK Shivakumar, the deputy chief minister and state party president, be the next chief minister of Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm