ಬ್ರೇಕಿಂಗ್ ನ್ಯೂಸ್
28-06-24 07:06 pm HK News Desk ಕರ್ನಾಟಕ
ಬೆಳಗಾವಿ, ಜೂ 28: ಹಣಕ್ಕೆ ಬೇಡಿಕೆಯಿಟ್ಟು ಹೆಸ್ಕಾಂ ಅಧಿಕಾರಿ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಆರೋಪದ ಮೇಲೆ ದೂರುದಾರೆ ಸೇರಿದಂತೆ 13 ಮಂದಿಗೆ ಆರೋಪಿಗಳಿಗೆ ಬೆಳಗಾವಿ ಜಿಲ್ಲಾ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 86 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು ಸೇರಿರುವ ಮಹಿಳೆ. ಅಪರಾಧಿ ಸಿಂಧು ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರರಾದ ತುಕಾರಾಮ್ ಮಜ್ಜಿಗೆ ವಿರುದ್ಧ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. ಸುಳ್ಳು ಕೇಸ್ ಎಂದು ವಿಚಾರಣೆ ವೇಳೆ ಸಾಬೀತಾದ ಹಿನ್ನೆಲೆ ದೂರುದಾರೆ ಬಿ.ವಿ ಸಿಂಧು ಸೇರಿ 13 ಜನರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
2014ರ ನವೆಂಬರ್ 19ರಂದು ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪ ಮಾಡಿ ಮಹಿಳೆಯೊಬ್ಬರು ಕೇಸ್ ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಅತ್ಯಾಚಾರ, ಜೀವ ಬೆದರಿಕೆ ಹಾಕಿದ್ದು ಸುಳ್ಳು ಎಂದು ತನಿಖೆಯಲ್ಲಿ ಬಯಲಾಗಿತ್ತು. ವಿಚಾರಣೆ ವೇಳೆ ಪ್ರಕರಣದ ಇತರೆ ಆರೋಪಿಗಳಿಂದ ಪ್ರಭಾವಿತಳಾಗಿ ಸುಳ್ಳು ದೂರು ದಾಖಲಿಸಿದ್ದಾಗಿ ಸಿಂಧು ತಪ್ಪೊಪ್ಪಿಕೊಂಡಿದ್ದಳು.
2017ರಲ್ಲಿ ದೂರುದಾರೆ ಸಿಂಧು ಸೇರಿದಂತೆ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ತುಕಾರಾಮ್ ಮಜ್ಜಿಗೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದರು. ಏಳು ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ, ತಲಾ 86 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಮೂರ್ತಿ ಆದೇಶ ಹೊರಡಿಸಿದ್ದಾರೆ.
The principal district and sessions court of Belagavi on Thursday sentenced 13 people to imprisonment in a case of false rape accusations against their superior officer at the local Hescom office. The court sentenced them, including a woman - the main accused - to three years and six months of imprisonment and fined them Rs 86,000 each. The district and session court judge L Vijayalakshmi Devi pronounced the verdict on Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm