ಬ್ರೇಕಿಂಗ್ ನ್ಯೂಸ್
29-06-24 04:47 pm Headline Karnataka News ಕರ್ನಾಟಕ
ಬೆಂಗಳೂರು, ಜೂನ್ 29: 2028ರಲ್ಲಿ ನಾನು ಕೂಡ ಮುಖ್ಯಮಂತ್ರಿಯಾಗಲು ಹಕ್ಕು ಮಂಡಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು ಆಮೂಲಕ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, “2028ರಲ್ಲಿ ನಾನು ಸಿಎಂ ಆಗುತ್ತೇನೆ. ಆಗಿನ ಚುನಾವಣೆ ಫಲಿತಾಂಶದ ಬಳಿಕದ ಪರಿಸ್ಥಿತಿ ನೋಡಿಕೊಂಡು ಸಿಎಂ ಸ್ಥಾನಕ್ಕೆ ಹಕ್ಕು ಚಲಾವಣೆ ಮಾಡುತ್ತೇನೆ. ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುಗಿದುಹೋಗಿದೆ. ಡಿಸಿಎಂಗಳ ವಿಚಾರವೂ ಚುನಾವಣೆ ಮೊದಲು ಕೇಳಿಬಂದಿತ್ತು. ಈಗ ಮಾಡಬೇಕಾ, ಬೇಡವಾ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಜೋರಾಗಿದೆ. ಒಕ್ಕಲಿಗರ ಬೆನ್ನಲ್ಲೇ ಲಿಂಗಾಯತ ಸ್ವಾಮೀಜಿಗಳು ನಾಯಕರ ಹೆಸರನ್ನು ಸೂಚಿಸಿ, ಇವರನ್ನೇ ಸಿಎಂ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಸಚಿವರು ಕೂಡ ಇದನ್ನೇ ಚರ್ಚಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಮುಂದಿನ ಚುನಾವಣೆ ಬಳಿಕ ನಾನೇ ಸಿಎಂ ಎಂದು ಸತೀಶ್ ಜಾರಕಿಹೊಳಿ ಅವರು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಮಾಡಿದ್ದರು. "ಎಲ್ಲರೂ ಮುಖ್ಯಮಂತ್ರಿಗಳಾಗಿ ಅಧಿಕಾರ ಅನುಭವಿಸಿದ್ದಾರೆ. ಆದರೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಸಿಎಂ ಸ್ಥಾನ ಅನುಭವಿಸಿದ್ದಾರೆ. ಇನ್ನು ಮುಂದೆ ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಹೇಳಿದ್ದರು.
ಒಕ್ಕಲಿಗ ಸಿಎಂ ಹೇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಸ್ವಾಮೀಜಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದು ಮುಂದಿನ ಬಾರಿ ವೀರಶೈವ ಲಿಂಗಾಯತ ಸಮುದಾಯದ ನಾಯಕರಿಗೆ ಸಿಎಂ ಸ್ಥಾನ ಕೊಡಬೇಕು. ರಾಜ್ಯದಲ್ಲಿ ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯವು ಕಾಂಗ್ರೆಸ್ ಬೆಂಬಲಿಸಿದ್ದು ಇದರಿಂದಾಗಿಯೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಕೊಟ್ಟರೆ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿಯಾಗುತ್ತದೆ. ಸಿಎಂ ಸ್ಥಾನ ಅಲ್ಲದಿದ್ದರೂ ಡಿಸಿಎಂ ಸ್ಥಾನವನ್ನಾದರೂ ಕೊಡಬೇಕು ಎಂದು ಹೇಳಿಕೆ ನೀಡಿದ್ದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
Even as the Congress is under pressure from different community leaders for a change of guard in Karnataka, several ministers in the Siddaramaiah Cabinet are unwilling to endorse the views of the seers and political leaders on the possible change of the CM and increasing the number of DyCMs.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm