ಬ್ರೇಕಿಂಗ್ ನ್ಯೂಸ್
01-07-24 06:48 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ನಾಪತ್ತೆಯಾಗಿದ್ದ ಕಾನ್ಸ್‌ಟೇಬಲ್ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಶಿವರಾಜ್ ಕಳೆದ ಜೂ.26ರಂದು ನಾಪತ್ತೆ ಆಗಿದ್ದರು.
2020ರಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದ ಕಾನ್ಸ್‌ಟೇಬಲ್ ಶಿವರಾಜ್ ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ ಕಳೆದ 26ರಂದು ಶಿವರಾಜ್ ಯಾರ ಸಂಪರ್ಕಕ್ಕೂ ಸಿಗದೆ ಏಕಾಏಕಿ ನಾಪತ್ತೆ ಆಗಿದ್ದರು. ಹೀಗಾಗಿ ಶಿವರಾಜ್ ಸಹೋದರ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದೂರು ನೀಡಿದ್ದರು. ಸಹೋದರ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದರು.
ಮದುವೆಯಾದ ಮೂರೇ ತಿಂಗಳಿಗೆ ಪತಿ-ಪತ್ನಿ ದೂರ ;
ಕೌಟುಂಬಿಕ ಕಾರಣಕ್ಕೆ ಮನನೊಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡರಾ ಎಂಬ ಅನುಮಾನವು ಶುರುವಾಗಿದೆ. ಯಾಕೆಂದರೆ ಮೂರು ತಿಂಗಳ ಹಿಂದಷ್ಟೇ ಶಿವರಾಜ್, ವಾಣಿ ಎಂಬಾಕೆಯನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಬಳಿಕ ಪತಿ-ಪತ್ನಿ ದೂರುವಾಗಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ಶಿವರಾಜ್ ಹಾಗು ಕುಟುಂಬದವರ ವಿರುದ್ಧ ವಾಣಿ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೇಲಿಂದ ಮೇಲೆ ಬೆದರಿಕೆ ಹಾಕಿದ್ದಳು. ಕರ್ತವ್ಯಕ್ಕೆ ಹೊರಟ ಶಿವರಾಜ್ ನಾಪತ್ತೆಯಾಗಿದ್ದ, ಪತ್ನಿ ವಾಣಿ ಕಿರುಕುಳದಿಂದ ಬೇಸತ್ತು ಹೋಗಿದ್ದ ಎಂದು ಶಿವರಾಜ್ ಸಹೋದರ ದೂರಿನಲ್ಲಿ ಉಲ್ಲೇಖಿಸಿದ್ದರು.
ಇದೀಗ ನಾಪತ್ತೆಯಾಗಿದ್ದ ಮಡಿವಾಳ ಠಾಣೆ ಕಾನ್ಸ್‌ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಶವ ಪತ್ತೆಯಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು, ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಳು ಬಾವಿಯಲ್ಲಿ ಬಿದ್ದಿದ್ದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ.
Bangalore madivala police constable dead body found in well. The deceased has been identified as Shivaraj. He was married just three months ago and is said was leaving separate due to fight between husband and wife.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm