ಬ್ರೇಕಿಂಗ್ ನ್ಯೂಸ್
02-07-24 02:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.02: ನಟ ದರ್ಶನ್ ಮೇಲಿನ ಮಿತಿಮೀರಿದ ಅಭಿಮಾನದ ಹುಚ್ಚಿನಿಂದಾಗಿ ಅಭಿಮಾನಿಯೊಬ್ಬ ತಾನು ಹೆತ್ತ ಮಗುವನ್ನೇ ಕೈದಿ ಮಾಡಿ ಹಾಕಿದ್ದಾನೆ!
ಹೌದು, ಇದು ನಟನ ಮೇಲಿನ ಅಂಧಾಭಿಮಾನದ ಎಫೆಕ್ಟ್. ಮಗುವಿಗೆ ಪರಪ್ಪನ ಅಗ್ರಹಾರದ ಕೈದಿಯಂತೆ ಫೋಟೋ ಶೂಟ್ ಮಾಡಿಸಿದ್ದಾನೆ ಈ ಪುಣ್ಯಾತ್ಮ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ನ ಅಭಿಮಾನಿಗಳು ದಿನಕ್ಕೊಂದು ಅವತಾರ ತೋರುತ್ತಿದ್ದಾರೆ. ಇದೀಗ ಹೊಸದು. ಒಂದು ವರ್ಷದ ಮಗುವಿಗೆ ಜೈಲು ಕೈದಿಯ ರೀತಿ ಬಿಳಿ ಬಟ್ಟೆ ಹಾಕಿಸಿ ಈತ ಫೋಟೋ ಶೂಟ್ ಮಾಡಿಸಿದ್ದು, ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಮಗುವಿಗೆ ದರ್ಶನ್‌ಗೆ ಕೊಡಲಾದ ಕೈದಿ ನಂಬರ್ ನೀಡಿದ್ದಾನೆ. ಕೈ ಕೋಳದ ಮಾದರಿ, ಕೈದಿಗಳ ರೀತಿ ಬಿಳಿ ಬಟ್ಟೆ ಹಾಕಿಸಿದ್ದಾನೆ.

ನಟನ ಮೇಲಿನ ಹುಚ್ಚು ಅಭಿಮಾನಕ್ಕೆ ಅಭಿಮಾನಿಗಳಿಂದ ನಿತ್ಯ ಒಂದೊಂದು ಹೊಸ ಟ್ರೆಂಡ್ ಸೃಷ್ಟಿಯಾಗುತ್ತಿದೆ. ದರ್ಶನ್‌ಗೆ ನೀಡಿರುವ ಕೈದಿ ನಂಬರ್ ಧರಿಸಿಕೊಂಡು ಒಬ್ಬಾತ ಫೋಟೋ ಶೂಟ್ ಮಾಡಿಸಿಕೊಂಡಿದ್ದ. ಇದೀಗ ಮಗುವಿಗೆ ಹೀಗೆ ಫೋಟೋ ಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾನಾ ಥರದ ಅಭಿಪ್ರಾಯಗಳು ವ್ಯಕ್ತವಾಗಿವೆ.
ʼಹಿಂದೆಲ್ಲ ಮಕ್ಕಳಿಗೆ ಕೃಷ್ಣನ ವೇಷ, ಸ್ವಾಮಿ ವಿವೇಕಾನಂದರ ವೇಷ, ಅಂಬೇಡ್ಕರ್ ಅವರಂತಹ ಗಣ್ಯ ವ್ಯಕ್ತಿಗಳ ರೀತಿಯ ಫೋಟೋ ಶೂಟ್ ಟ್ರೆಂಡ್ ಆಗಿತ್ತು. ಆದರೆ ಈಗ ಬೆಳೆಯುವ ಮಗುವಿಗೆ ಕೈದಿ ಫೋಟೋ ಶೂಟ್ ಮಾಡಿಸೋದೆ ಟ್ರೆಂಡ್ ಆಗಿದೆʼ ಎಂದು ಒಬ್ಬರು ಹೇಳಿದ್ದಾರೆ. “ಈಗಿಂದಾನೇ ಮಗನನ್ನು ಜೈಲಿಗೆ ಕಳಿಸೋ ಪ್ಲಾನ್ ಇದು. ನಟ ಒಳ್ಳೇದು ಮಾಡಿದಾಗ ಅಭಿಮಾನಿಗಳು ಸಂಭ್ರಮಿಸಿ ತಪ್ಪೇನೂ ಇಲ್ಲ. ಆದರೆ ಕೆಟ್ಟದು ಮಾಡಿದಾಗ ಖಂಡಿಸಿʼ ಎಂದು ಮತ್ತೊಬ್ಬರು ಬರೆದಿದ್ದಾರೆ.
Actor Darshan Fan makes baby wear prison costume, photos go viral with cell no 6106 on the dress. Comments on Internet has slammed darshan fan for such photo shoot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm