ಬ್ರೇಕಿಂಗ್ ನ್ಯೂಸ್
10-07-24 08:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 10: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರನ್ನು ಇಡಿ ಅಧಿಕಾರಗಳು ವಿಚಾರಣೆ ನಡೆಸಿದ್ದಾರೆ.
ನಾಗೇಂದ್ರ ಅವರ ಬಳ್ಳಾರಿಯ ನೆಹರೂ ಕಾಲೋನಿಯಲ್ಲಿರುವ ನಿವಾಸ ಹಾಗೂ ಬೆಂಗಳೂರಿನ ಡಾಲರ್ಸ್ ಕಾಲನಿಯ ನಿವಾಸಕ್ಕೆ ಇ.ಡಿ. ಅಧಿಕಾರಿಗಳು ಬುಧವಾರ ಬೆಳಗ್ಗಿನಿಂದಲೇ ದಾಳಿ ನಡೆಸಿದ್ದು ಅಲ್ಲಿರುವ ಸಿಬಂದಿ, ಆಪ್ತರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಬೆಂಗಳೂರಿನ ಮನೆಯಲ್ಲಿದ್ದ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.


ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಸೇರಿದ ಬೆಂಗಳೂರಿನ ಯಲಹಂಕದಲ್ಲಿರುವ ನಿವಾಸ ಹಾಗೂ ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ನಿವಾಸದ ಮೇಲೂ ಏಕಕಾಲದಲ್ಲಿ ಇ.ಡಿ. ಅಧಿಕಾರಿಗಳ ದಾಳಿ ನಡೆದಿದೆ. ವಾಲ್ಮೀಕಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಮಂಗಳವಾರವಷ್ಟೇ ಹಾಜರಾಗಿದ್ದ ದದ್ದಲ್, ವಿಚಾರಣೆ ಎದುರಿಸಿ ಹೋಗಿದ್ದರು. ಅದಾದ ಮರುದಿನವೇ ಅವರ ನಿವಾಸದ ಮೇಲೆ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಗಳವಾರ ನಡೆದಿದ್ದ ಎಸ್ ಐಟಿ ವಿಚಾರಣೆಗೆ ಬಿ. ನಾಗೇಂದ್ರ ಕೂಡ ಹಾಜರಾಗಿದ್ದರು. ಆ ವೇಳೆ, ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ, ಬಸನಗೌಡ ದದ್ದಲ್ ಗೆ ಮಂಗಳವಾರ ಪ್ರಶ್ನೆಗಳ ಸುರಿಮಳೆಗೈದಿದ್ದರು. ಸತತ 8 ಗಂಟೆ ವಿಚಾರಣೆ ನಡೆಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಪ್ತ ಸಹಾಯಕನ ಆಡಿಯೋ ಆಧಾರದ ಮೇಲೆ ಬಿ.ನಾಗೇಂದ್ರರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಬುಧವಾರ ಬೆಳಗ್ಗಿನಿಂದ ಸಂಜೆಯ ವರೆಗೂ ಸುದೀರ್ಘ ಸಮಯ ವಿಚಾರಣೆ ನಡೆಸಿದ್ದು ಸಾಕ್ಷ್ಯ ಸಿಕ್ಕಲ್ಲಿ ಅರೆಸ್ಟ್ ಆಗುವ ಸಾಧ್ಯತೆಯಿದೆ.
ವಾಲ್ಮೀಕಿ ನಿಗಮದಲ್ಲಿ 194 ಕೋಟಿ ರೂ. ಮೊತ್ತವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ ಡ್ರಾ ಮಾಡಲಾಗಿದೆ. ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಿರುವುದರಿಂದ ಇಡಿ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
Enforcement Directorate (ED) officials on Wednesday morning raided the houses of former Scheduled Tribe Welfare minister B Nagendra and Congress MLA Basanagouda Daddal. The raid came a day after both politicians appeared before the Special Investigation Team (SIT) probing the alleged multi-crore scam at the Karnataka Maharshi Valmiki Scheduled Tribes Development Corporation for questioning. The ED officials visited.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm