ಬ್ರೇಕಿಂಗ್ ನ್ಯೂಸ್
19-07-24 10:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ವರ್ಗಾಯಿಸಿಕೊಂಡ ಹಣದಲ್ಲಿ ದೊಡ್ಡ ಮೊತ್ತವನ್ನು ರಾಜ್ಯ ಸರ್ಕಾರದ ‘’ಗ್ಯಾರಂಟಿ ಕಾರ್ಡ್’’ ತಯಾರಿಸಿಕೊಟ್ಟಿದ್ದ ಕಂಪನಿಯೊಂದಕ್ಕೆ ನೀಡಲಾಗಿತ್ತು ಎಂಬ ಮಾಹಿತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಪ್ರಕರಣದ ಆರೋಪಿ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಪುನಃ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು ಸಲ್ಲಿಸಿದ್ದ ರಿಮ್ಯಾಂಡ್ ಅರ್ಜಿಯಲ್ಲಿ ಈ ಮಾಹಿತಿ ಉಲ್ಲೇಖಿಸಲಾಗಿದೆ. ಇದರ ಬೆನ್ನಲ್ಲೇ ನ್ಯಾಯಾಲಯದ ಅನುಮತಿ ಮೇರೆಗೆ ಐದು ದಿನಗಳ ಹೆಚ್ಚುವರಿ ಕಸ್ಟಡಿ ಪಡೆದಿರುವ ಇಡಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಆರೋಪಿ ನಾಗೇಂದ್ರ ಅವರ ಹೆಚ್ಚಿನ ವಿಚಾರಣೆ ಕುರಿತಂತೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿರುವ ಇಡಿ ಅಧಿಕಾರಿಗಳು, ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಹಣದಲ್ಲಿ ಗ್ಯಾರಂಟಿ ಕಾರ್ಡ್ ತಯಾರಿಕೆ ಕಂಪನಿಯೂ ಫಲಾನುಭವಿಯಾಗಿದೆ. ಈ ಕಂಪನಿಗೆ ಎಷ್ಟು ಮೊತ್ತ ನೀಡಲಾಗಿದೆ. ಯಾವ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗಿದೆ ಎಂಬುದು ಸೇರಿದಂತೆ ಹಲವು ಮಾಹಿತಿಯನ್ನು ಆರೋಪಿಯ ವಿಚಾರಣೆ ನಡೆಸಿ ಪಡೆಯಬೇಕಿದೆ ಎಂದು ವಿವರಿಸಿದ್ದಾರೆ.
ಮೂರು ಮೊಬೈಲ್ ನಾಶಪಡಿಸಿದ್ದ ನಾಗೇಂದ್ರ
ವಾಲ್ಮೀಕಿ ನಿಗಮದ 187 ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಳ್ಳಲು ರೂಪಿಸಿದ್ದ ಸಂಚಿನಲ್ಲಿ ಮಾಜಿ ಸಚಿವ ನಾಗೇಂದ್ರ ಪ್ರಧಾನ ಪಾತ್ರ ವಹಿಸಿದ್ದಾರೆ. ಅಕ್ರಮ ಬೆಳಕಿಗೆ ಬರುತ್ತಲೇ ಡಿಜಿಟಲ್ ಸಾಕ್ಷ್ಯಗಳಿದ್ದ ಮೂರು ಮೊಬೈಲ್ ಗಳನ್ನು ನಾಶಪಡಿಸಿದ್ದಾರೆ ಎಂದು ಇಡಿ ಅಧಿಕಾರಿಗಳು ಕೋರ್ಟಿಗೆ ತಿಳಿಸಿದ್ದಾರೆ. ಇದಲ್ಲದೆ, ನಾಗೇಂದ್ರ ಹಾಗೂ ಅವರ ಕುಟುಂಬ ಸದಸ್ಯರಿಗೆ ಕಳೆದ ಎರಡು ವರ್ಷಗಳಿಂದ ಒಂದು ನಿರ್ದಿಷ್ಟ ಕಂಪನಿ ವಿಮಾನ ಪ್ರಯಾಣದ ಟಿಕೆಟ್ ನಿರಂತರವಾಗಿ ಬುಕ್ ಮಾಡಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿವೆ. ನಾಗೇಂದ್ರ ಹಾಗೂ ಆ ಕಂಪನಿ ನಡುವಿನ ಸಂಬಂಧ ಏನು, ಯಾವ ವಿಚಾರಕ್ಕಾಗಿ ಟಿಕೆಟ್ ಬುಕ್ ಮಾಡಿಕೊಳ್ಳಲಾಗಿತ್ತು. ಪ್ರಯಾಣದ ಟಿಕೆಟ್ ಮೊತ್ತ ಎಷ್ಟಾಗಿತ್ತು ಎಂಬುದು ಸೇರಿದಂತೆ ಹಲವು ವಿಚಾರಗಳ ಕುರಿತು ಆರೋಪಿ ಸಮ್ಮುಖದಲ್ಲಿ ತನಿಖೆ ನಡೆಯಬೇಕಿದೆ ಎಂದು ಇಜಿ ಅಧಿಕಾರಿಗಳು ಕೋರ್ಟಿನಲ್ಲಿ ತಿಳಿಸಿದ್ದಾರೆ.
A special court here on Thursday extended by five days the Enforcement Directorate (ED) custody of former Karnataka Minister B Nagendra in connection with a money laundering probe linked to alleged irregularities in the Karnataka Maharshi Valmiki Scheduled Tribes Development Corporation Ltd.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm