ಬ್ರೇಕಿಂಗ್ ನ್ಯೂಸ್
20-07-24 03:04 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 20: ನೀವು ರೀಲ್ಸ್ ಪ್ರಿಯರೇ? ನಿಮಗೂ ರೀಲ್ಸ್ ಮಾಡುವ ಹವ್ಯಾಸವಿದೆಯಾ? ಹಾಗಿದ್ರೆ ತಡ ಯಾಕೆ? ಬಿಬಿಎಂಪಿ ನಿಮಗೆಂದೇ ಭರ್ಜರಿ ಆಫರ್ ತೆರೆದಿಟ್ಟಿದೆ. ಒಂದು ಲಕ್ಷ ರೂಪಾಯಿ ಗೆಲ್ಲುವ ಅವಕಾಶವನ್ನು ನೀಡುತ್ತಿದೆ.
ಬಿಬಿಎಂಪಿ ಆರೋಗ್ಯ ಇಲಾಖೆ ರೀಲ್ಸ್ ಮಾಡಿ ಒಂದು ಲಕ್ಷಾ ಗೆಲ್ಲಿ ಎಂಬ ಸುವರ್ಣಾವಕಾಶವನ್ನು ನೀಡಿದೆ. ಡೆಂಘೀ ಹೆಚ್ಚಳ ಹಿನ್ನೆಲೆ ರೀಲ್ಸ್ ಮೂಲಕ ಡಿಂಘೀ ವಾರಿಯರ್ ಆಗಲು ಬಿಬಿಎಂಪಿ ಅವಕಾಶ ಮಾಡಿಕೊಡುತ್ತಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆ ಹಿನ್ನೆಲೆ, ಡೆಂಗ್ಯೂಗೆ ಕಡಿವಾಣ ಹಾಕಲು ಬಿಬಿಎಂಪಿ ಮನೆ ಮನೆ ಸರ್ವೇ ಮಾಡಿ ಜಾಗೃತಿ ಮೂಡಿಸುತ್ತಿದೆ. ಇದರ ಜೊತೆಗೆ ಅರಿವು ಮೂಡಿಸಲು ವಿಭಿನ್ನ ಕಾರ್ಯಕ್ರಮಕ್ಕೆ ಉತ್ತೇಜನ ನೀಡುತ್ತಿದೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಪಾಲಿಕೆ ಬಂಪರ್ ಬಹುಮಾನ ಘೋಷಿಸಿದೆ.
ಪಾಲಿಕೆ ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್‌ಗಳನ್ನು ಆಹ್ವಾನಿಸಿದೆ. ಮೊದಲ ಐದು ಉತ್ತಮ ರೀಲ್ಸ್‌ಗಳಿ ತಲಾ 25 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಹೇಳಿದೆ. ಇನ್ನು ದ್ವಿತೀಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಪಡಿಸಿದೆ.
ಶಾಲಾ ಮಕ್ಕಳಿಗೆ ಬಂಪರ್ ಆಫರ್;
ಉತ್ತಮ ರೀತಿಯಲ್ಲಿ ಹೆಚ್ಚು ವಿದ್ಯಾರ್ಥಿಗಳ ಮೂಲಕ ರೀಲ್ಸ್ ಮಾಡಿಸುವ ಶಾಲೆಗೆ ಬರೋಬ್ಬರಿ 1 ಲಕ್ಷ ಬಹುಮಾನ ನೀಡುವುದಾಗಿ ಬಿಬಿಎಂಪಿ ತಿಳಿಸಿದೆ. ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವೀಡಿಯೋ ಮಾಡಲು ಉತ್ತೇಜಿಸುವ ಶಿಕಕ್ಷಕರಿಗೂ 35 ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದೆ.
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿ ಅದನ್ನು ಬಿಬಿಎಂಪಿ ಆರೋಗ್ಯ ಇಲಾಖೆಗೆ ಫೇಸ್‌ಬುಕ್ ಮತ್ತು ಎಕ್ಸ್ (ಟ್ವಿಟ್ಟರ್) ಖಾತೆಗೆ ಟ್ಯಾಗ್ ಮಾಡಬೇಕು. ಡೆಂಗ್ಯೂ ಬಗ್ಗೆ ಹೆಚ್ಚಿನ ಮಾಹಿತಿಯೊಂದಿಗೆ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ತಕ್ಕಂತೆ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ರೀಲ್ಸ್ ಹಂಚಿಕೊಳ್ಳುವ ಪ್ರತಿಯೊಬ್ಬರಿಗೂ ಡೆಂಗ್ಯೂ ವಾರಿಯರ್ ಎಂಬ ಪಟ್ಟವನ್ನು ಪಾಲಿಕೆ ಆರೋಗ್ಯ ವಿಭಾಗ ನೀಡಲಿದೆ.
Bangalore BBMP Offer, 1 lakh worth price for good social media reels on dengue. BBMP has made a new program to bring awareness amount the public about dengue in form of reels from students.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm