ಬ್ರೇಕಿಂಗ್ ನ್ಯೂಸ್
22-07-24 11:08 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22: ಅಂಕೋಲಾದ ಶಿರೂರಿನಲ್ಲಿ ಭಾರೀ ಭೂಕುಸಿತದ ನಂತರ ರಸ್ತೆಯಲ್ಲಿ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಲಾಗಿದೆ. ಆದರೆ ಮಣಿನಡಿಯಲ್ಲಿ ಸಿಲುಕಿದವರು ಅಥವಾ ಟ್ರಕ್ ಬಗ್ಗೆ ಸುಳಿವು ಸಿಕ್ಕಿಲ್ಲ. ಮೂವರು ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದ್ದು ಇನ್ನೀಗ ಪಕ್ಕದ ನದಿ ಗಂಗಾವಳಿಯಲ್ಲಿ ಶೋಧ ಆರಂಭಿಸಲಾಗಿದೆ.
ಶಿರೂರು ಗುಡ್ಡಕುಸಿತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. "ರಸ್ತೆಯಲ್ಲಿ ಬಿದ್ದ ಮಣ್ಣಿನಡಿಯಲ್ಲಿ ಶೋಧ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ನಮಗೆ ಯಾವುದೇ ಬದುಕುಳಿದವರ ಅಥವಾ ಮೃತರ ಪತ್ತೆಯಾಗಿಲ್ಲ. ನಾವು ನದಿ ಮತ್ತು ತೆರೆದ ನೀರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಗಂಗಾವಳಿ ನದಿಯತ್ತ ಗಮನ ಹರಿಸಲಾಗಿದೆ. ನದಿಯ ಭಾಗದಲ್ಲಿ ಡೀಪ್ ಡೈವರ್‌ಗಳು ನೀರಿಗೆ ಧುಮುಕಿ ಟ್ರಕ್ ಕ್ಯಾಬಿನ್ ಪತ್ತೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್), ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ನೌಕಾಪಡೆ ಜಂಟಿಯಾಗಿ ಕಾರ್ಯಾಚರಣೆ ಮುಂದುವರೆಸಿವೆ. ಸ್ಥಳದಲ್ಲಿ 150ಕ್ಕೂ ಹೆಚ್ಚು ಸಿಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳಗಾವಿಯ ಮರಾಠಾ ಲೈಟ್ ಇನ್‌ಫೆಂಟ್ರಿ ರೆಜಿಮೆಂಟ್‌ನ ಅಧಿಕಾರಿ, ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 55 ಜನ ಇತರರು, ಪುಣೆಯ ಮಿಲಿಟರಿ ಇಂಜಿನಿಯರಿಂಗ್ ಕಾಲೇಜಿನ ಒಬ್ಬ ಜೂನಿಯರ್ ಕಮಿಷನ್ಡ್ ಅಧಿಕಾರಿ ಸಹ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದಾರೆ ಎಂದರು.
ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಸೋಮವಾರಕ್ಕೆ ಏಳು ದಿನವಾಗಿದೆ. ದುರಂತದಲ್ಲಿ ನಾಪತ್ತೆಯಾದ 10 ಜನರಲ್ಲಿ ಇದುವರೆಗೆ 7 ಮಂದಿಯ ಶವ ಮಾತ್ರ ಪತ್ತೆಯಾಗಿದೆ. ಕೇರಳ ಮೂಲದ ಲಾರಿಯೊಂದು ಮಣ್ಣಿನಲ್ಲಿ ಹೂತು ಹೋಗಿದೆಯೆಂದು ಹೇಳಲಾಗುತ್ತಿದ್ದು ಅದರ ಚಾಲಕನ ಪತ್ತೆಗಾಗಿ ಕೇರಳ ಸರ್ಕಾರದ ಅಧಿಕಾರಿಗಳು, ಆತನ ಕುಟುಂಬಸ್ಥರು, ಅಲ್ಲಿನ ಜನಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.
No survivor or truck was found under the accumulated mud on the road following a massive landslide in Shirur village in Uttara Kannada district and the focus has now shifted to the Gangavalli river to trace the three missing people, including a driver from Kerala, officials said on Monday. Seven bodies have been recovered so far since the incident on July 16, they said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm