ಬ್ರೇಕಿಂಗ್ ನ್ಯೂಸ್
26-07-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.26: ಡಿಸಿಎಂ ಡಿಕೆಶಿ ಬಯಕೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ ಪಾಟೀಲ್, ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ ಎಂದರು.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಹಿಂದೊಮ್ಮೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರವನ್ನು 2007ರಲ್ಲಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಿ ಮಾಡಲಾಗಿತ್ತು. ರಾಮನಗರ ತಾಲ್ಲೂಕಿನಲ್ಲಿ ಜಿಲ್ಲಾ ಕೇಂದ್ರದ ಜೊತೆಗೆ ಮೂರು ಇತರ ತಾಲ್ಲೂಕುಗಳಾದ ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿಯೊಂದಿಗೆ ಪುನರ್ ನಿರ್ಮಾಣ ಮಾಡಲಾಗಿತ್ತು. ಇದೀಗ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ನಗರವನ್ನು ವಿಸ್ತರಿಸುವುದು ಮತ್ತು ಗ್ರೇಟರ್ ಬೆಂಗಳೂರು ಆಗಿ ಅಭಿವೃದ್ಧಿ ಪಡಿಸುವ ದೂರದೃಷ್ಟಿ ಇದರ ಹಿಂದಿದೆ. ಜಿಲ್ಲೆಯ ಹೆಸರು ಬದಲಾಗುತ್ತಲೇ ಭೂಮಿಯ ದರ ದುಪ್ಪಟ್ಟಾಗಿದೆ.
The Greater Bengaluru Governance Bill, 2024, which was tabled in the Karnataka Legislative Assembly on Tuesday, is loaded with many new provisions to tax different stakeholders, including common citizens.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm