ಬ್ರೇಕಿಂಗ್ ನ್ಯೂಸ್
28-07-24 05:48 pm HK News Desk ಕರ್ನಾಟಕ
ಮೈಸೂರು, ಜುಲೈ.28: ಮೈಸೂರು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯ ಹಣೆಗೆ ಚಾಮರಾಜನಗರದ ಸಂಸದ ಸುನೀಲ್ ಬೋಸ್ ಕುಂಕುಮ ಇಟ್ಟಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಮೊನ್ನೆ (ಜುಲೈ 26) ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮರಾಜನಗರದ ನೂತನ ಸಂಸದ ಸುನೀಲ್ ಬೋಸ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಬಿ.ಕೆ. ಸವಿತಾ ಅವರ ಹಣೆಗೆ ಕುಂಕುಮ ಇಟ್ಟಿದ್ದಾರೆ. ಅಲ್ಲದೇ ತಾಯಿಯ ಆಶೀರ್ವಾದದ ಪ್ರಸಾದವನ್ನು ಸಹ ಅರ್ಚಕರು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಬಿ.ಕೆ. ಸವಿತಾ ಅವರಿಗೆ ನೀಡಿದ್ದಾರೆ.
ಈ ಫೋಟೋಗಳು ಸದ್ಯ ವೈರಲ್ ಆಗುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಸಂಸದರೊಬ್ಬರು ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಗತಿ ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಚಾಮುಂಡಿ ಬೆಟ್ಟಕ್ಕೆ ಸಂಸದ ಸುನೀಲ್ ಬೋಸ್ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜೊತೆಯಾಗಿ ಬಂದಿದ್ದರು. ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಜೊತೆಗೆ ಬೆಂಬಲಿಗರ ಸಮ್ಮುಖದಲ್ಲೇ ನಿರ್ದೇಶಕಿ ಸವಿತಾ ಅವರ ಹಣೆಗೆ ಸುನೀಲ್ ಬೋಸ್ ಕುಂಕುಮ ಇಟ್ಟಿದ್ದರು. ಘಟನೆಯ ವಿಡಿಯೋ, ಫೋಟೊಗಳು ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಚಾಮರಾಜನಗರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸುನೀಲ್ ಬೋಸ್ ಚುನಾವಣಾ ಆಯೋಗಕ್ಕೆ ಅಫಿಡೆವಿಟ್ ಸಲ್ಲಿಸುವ ವೇಳೆ ಹೆಂಡತಿ ಮಕ್ಕಳ ಹಾಗೂ ಹಿಂದೂ ಅವಿಭಕ್ತ ಕುಟುಂಬ ಬಗ್ಗೆ ನಿಖರವಾದ ಮಾಹಿತಿ ನೀಡಿರಲಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು ಎನ್ನಲಾಗಿದೆ.
ಸುನೀಲ್ ಬೋಸ್ ತಮ್ಮ ವೈವಾಹಿಕ ಜೀವನವನ್ನು ಮರೆಮಾಚಿದ್ದರು. ಇದಕ್ಕೆ ಪ್ರತಿಯಾಗಿ ಚಾಮರಾಜನಗರ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಿತ್ತು. ಸುನೀಲ್ ಬೋಸ್ ಅವರು ಎಂ.ಕೆ. ಸವಿತಾ ಅವರನ್ನು ಮದುವೆಯಾಗಿದ್ದು, ಆರು ವರ್ಷದ ಹೆಣ್ಣುಮಗುವಿದೆ ಎಂದು ಫೋಟೊ ಸಹಿತ ದೂರು ನೀಡಿದ್ದರು.
ಇದೀಗ ಚಾಮುಂಡಿ ಬೆಟ್ಟದ ಫೋಟೋ ಸಖತ್ ವೈರಲ್ ಆಗುತ್ತಿದ್ದು, ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಈ ಬಾರಿ ಸಂಸದರ ಫೋಟೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳಿಗೆ ಮತ್ತೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
MP Sunil Bose picture of temple with lady KAS officer goes viral. MP who had stated that he wasn't married in the affidavit was seen keeping kumkum on kas lady officer as wife at temple in Mysuru.The picture has gone viral on social media
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am