ಬ್ರೇಕಿಂಗ್ ನ್ಯೂಸ್
01-08-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 1: ಮೂಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತನಿಖೆಯ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿರುವ ಶೋಕಾಸ್ ನೋಟಿಸ್ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ನೋಟಿಸ್ ಹಿಂಪಡೆಯಬೇಕೆಂದು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯಪಾಲರು ಮುಖ್ಯಮಂತ್ರಿಗೆ ನೀಡಿರುವ ನೋಟಿಸ್ ಅನ್ನು ಹಿಂಪಡೆಯಬೇಕು ಹಾಗೂ ದೂರುದಾರ ಟಿಜೆ ಅಬ್ರಹಾಂ ನೀಡಿರುವ ಅರ್ಜಿಯನ್ನು ತಿರಸ್ಕಾರ ಮಾಡಬೇಕು ಎಂದು ರಾಜ್ಯಪಾಲರಿಗೆ ಒತ್ತಾಯಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, "ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ. 136 ಸ್ಥಾನ ಗೆದ್ದು ಸರ್ಕಾರ ರಚನೆ ಮಾಡಲಾಗಿದೆ. ಕಾನೂನು ಹಾಗೂ ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಟಿಜೆ ಅಬ್ರಹಾಂ ಎಂಬ ವ್ಯಕ್ತಿಯ ಮೂಲಕ ದೂರು ಕೊಡಿಸಲಾಗಿದೆ. ಜುಲೈ 26ರಂದು ಸಿದ್ದರಾಮಯ್ಯ ವಿರುದ್ಧ ಅಬ್ರಹಾಂ ದೂರು ನೀಡುತ್ತಾರೆ. ಇದೇ ವೇಳೆ ಜುಲೈ 5 ರಂದು ಮೂಡಾದಲ್ಲಿ ಹಗರಣ ಆಗಿದೆ ಎಂದು ರಾಜ್ಯಪಾಲರಿಂದ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
ಜುಲೈ 15ರಂದು ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಮೂಡಾದಲ್ಲಿ ಅಕ್ರಮವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರು. ಆದರೆ, ಟಿಜೆ ಅಬ್ರಹಾಂ ದೂರು ಕೊಟ್ಟ ದಿನದಂದೇ ಗವರ್ನರ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಅಲ್ಲದೆ, 7 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಈ ರೀತಿಯ ನಡೆಯನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ಷೇಪಿಸಿದರು. ಈಗಾಗಲೇ ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಯುತ್ತಿದೆ. ಹಾಗಿದ್ದರೂ ಇಷ್ಟು ತರಾತುರಿಯಲ್ಲಿ ಶೋಕಾಸ್ ನೋಟಿಸ್ ಕೊಡುತ್ತಾರೆ ಎಂದರೆ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.
In a major political development, Governor Thaawarchand Gehlot is learnt to have issued a “showcause notice” to Chief Minister Siddaramaiah seeking more explanation from him on the alleged irregularities in allotment of sites by the Mysuru Urban Development Authority (MUDA) to his wife.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am