ಬ್ರೇಕಿಂಗ್ ನ್ಯೂಸ್
07-08-24 03:22 pm Bangalore Correspondent ಕರ್ನಾಟಕ
ಬೆಂಗಳೂರು, ಆ.07: ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿದ್ದಾರೆ. ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಗಡೆ ಬಂದು ವಿಲ ವಿಲ ಒದ್ದಾಡಿ ಸಾವನ್ನಪ್ಪಿದೆ.
ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಂಚನಾಗೆ ಬರುವ ಆಗಸ್ಟ್ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ನಲ್ಲಿ ದಾಬಸ್ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಮರಳಿ ತಮ್ಮೂರು ತೋಟನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಆಗ ಸಿಂಚನಾ ಬೈಕ್ನಿಂದ ಕೆಳೆಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ. ಮನಕಲಕುವ ಘಟನೆ ಕಂಡು ಸ್ಥಳೀಯರು ಕೂಡ ಕಣ್ಣೀರು ಹಾಕಿದ್ದಾರೆ.
ಮೃತ ದೇಹದ ಮುಂದೆ ಪತಿ ಮಂಜುನಾಥ್ ಹಾಗೂ ಅತ್ತೆಯ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹದ ರವಾನೆ ಮಾಡಲಾಗಿದೆ.
ಘಟನೆ ಸಂಬಂಧ ಮೃತ ಸಿಂಚನಾ ಪತಿ ಮಂಜುನಾಥ ಮಾತನಾಡಿ, ಶಿವಗಂಗೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ದಾಬಸ್ಪೇಟೆ ಮುಖಾಂತರ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಎಡೆಹಳ್ಳಿ ಮುಖಾಂತರವಾಗಿ ತೋಟನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದೇವು. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ನಾವಿದ್ದ ಬೈಕಿಗೆ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದಾಗ ಸಿಂಚನಾ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೊಟ್ಟೆಯಿಂದ ಮಗು ಆಚೆ ಬಂದಿದೆ ಈ ದೃಶ್ಯ ನೋಡಲು ನನ್ನಿಂದ ಸಾಧ್ಯವಿಲ್ಲ ಎಂದು ಗೋಳಾಡಿದ್ದಾರೆ.
ಕಳೆದ ಆರು ತಿಂಗಳಲ್ಲಿ ನೆಲಮಂಗಲ ಸಾಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತ ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
Nelmangala accident, 8 months Pregnant women dies after truck rams bike in bangalore, baby dies after coming out of stomach. They had visited temple for Pooja and while returning back home truck rammed their bike after which both baby and mother have passed away.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am