ಬ್ರೇಕಿಂಗ್ ನ್ಯೂಸ್
09-08-24 01:35 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 9: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರನ್ ವಯನಾಡಿನಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಿದ್ದಾನೆ. ಸಂತ್ರಸ್ತರಿಗೆ 15 ಕೋಟಿ ರೂ. ದೇಣಿಗೆ ಹಾಗೂ 300 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಆರೋಪಿ ಪತ್ರ ಬರೆದಿದ್ದಾನೆ.
ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಸುಕೇಶ್ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ವಯನಾಡಿನ ಭೂಕುಸಿತ ದುರಂತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ದೇವರ ನಾಡು ಕೇರಳದ ಬಗ್ಗೆ ಅಪಾರ ಅಭಿಮಾನ ಇದೆ. ಅಲ್ಲಿನ ಜನರು ನನ್ನ ಕಷ್ಟದ ದಿನಗಳಲ್ಲಿ ಬೆಂಬಲ ನೀಡಿದ್ದಾರೆ. ದುರಂತದ ಪರಿಹಾರ ನಿಧಿಗೆ 15 ಕೋಟಿ ರೂ. ನೆರವು ನೀಡಬೇಕೆಂದಿದ್ದೇನೆ. ದಯವಿಟ್ಟು ನನ್ನ ನೆರವು ಸ್ವೀಕರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. ಹಣವನ್ನು ಹೊರತುಪಡಿಸಿ ಸಂತ್ರಸ್ತರಿಗೆ ತುರ್ತು ಅಗತ್ಯದ ನೆಲೆಯಲ್ಲಿ 300 ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾನೆ.
ಆರೋಪಿ ಚಂದ್ರಶೇಖರ್ ಬರೆದಿರುವ ಪತ್ರ ಎಂದು ಆತನ ಪರ ವಕೀಲ ಅನಂತ್ ಮಲಿಕ್ ಅವರು ಖಚಿತಪಡಿಸಿದ್ದಾರೆ. ಕಾನೂನುಬದ್ಧ ವ್ಯವಹಾರದ ಖಾತೆಗಳಿಂದಲೇ ಈ ಹಣ ನೀಡುವುದಾಗಿ ತಿಳಿಸಿರುವ ಸುಕೇಶ್ ಚಂದ್ರಶೇಖರ್, ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ಸ್ವೀಕರಿಸಬೇಕು ಮತ್ತು ಭೂಕುಸಿತ ದುರಂತಲ್ಲಿ ಸಂತ್ರಸ್ತರ ಕಲ್ಯಾಣ ಮತ್ತು ಪುನರ್ವಸತಿಗಾಗಿ ಈ ಹಣವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸದ್ಯ ಸುಕೇಶ್ ಚಂದ್ರಶೇಖರ್ ಪತ್ರಕ್ಕೆ ಕೇರಳ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಕಳೆದ ಜುಲೈ 30ರ ತಡರಾತ್ರಿ ವಯನಾಡಿನ ಚೂರಲ್ಮಲ ಹಾಗೂ ಮುಂಡಕ್ಕೈ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದಿಂದ ನೂರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. 400ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಏತನ್ಮಧ್ಯೆ, ಭೂಕುಸಿತ ಪೀಡಿತ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ನಾಪತ್ತೆಯಾದವರ ಹುಡುಕಾಟ ಮುಂದುವರಿದಿದೆ. ಸೇನೆ ಮತ್ತು ನೌಕಾಪಡೆ ಸೇರಿದಂತೆ ವಿವಿಧ ಪಡೆಗಳ 1000ಕ್ಕೂ ಹೆಚ್ಚು ಸಿಬ್ಬಂದಿ, 500ಕ್ಕೂ ಹೆಚ್ಚು ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದೇ ವೇಳೆ, ಕರ್ನಾಟಕ ಸರ್ಕಾರ ವಯನಾಡು ಸಂಸತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಣೆ ಮಾಡಿದೆ.
Alleged conman Sukesh Chandrasekhar has written a letter to Kerala Chief Minister Pinarayi Vijayan, requesting him to accept his contribution of Rs 15 crore to the Chief Minister’s Distress Relief Fund following a landslide in Wayanad district.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am