ಬ್ರೇಕಿಂಗ್ ನ್ಯೂಸ್
17-08-24 01:21 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಹೊರಡಿಸಿರುವ ಆದೇಶ ಪ್ರತಿ ಹೊರ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಿನ ಕ್ರಮಗಳು ಆರಂಭವಾಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ನೀಡಿರುವ ಆದೇಶ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಆದೇಶದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಸಾಹೇಬರು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇದು ರಾಜಕೀಯ ಪಿತೂರಿ ಅಜೆಂಡಾ ಸಿದ್ದರಾಮಯ್ಯ ಸಾಹೇಬರು ರಾಜೀನಾಮೆ ಕೊಡುವ ಪ್ರಮೇಯ ಇಲ್ಲ. ಈಗಾಗಲೇ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಇನ್ನೂ ವರದಿ ಬಂದಿಲ್ಲ ಅಷ್ಟರಲ್ಲಿ ಇದನ್ನ ದುರುಪಯೋಗ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದರು.
ನಮ್ಮ ರಾಜ್ಯದ ರಾಜ್ಯಪಾಲರ ಮೇಲೆ ನಂಬಿಕೆ ಇತ್ತು. ಸಂವಿಧಾನಿಕ ಸ್ಥಾನದಲ್ಲಿ ಕುಳಿತ, ಸಂವಿಧಾನ ಎತ್ತಿ ಹಿಡಯಬೇಕಾದ ರಾಜ್ಯಪಾಲರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯೇತರ ರಾಜ್ಯಗಳಿಗೆ ಬಿಜೆಪಿಯವರು ತೊಂದರೆ ಕೊಡುತ್ತಿದ್ದಾರೆ. ಬಿಜೆಪಿ ಇಲ್ಲದ ರಾಜ್ಯಗಳಲ್ಲಿ ಇಡಿ, ಐಟಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಮೇಯ, ಅವಶ್ಯಕತೆ ಇಲ್ಲ. ಇದರಿಂದ ಸರ್ಕಾರದ ಮೇಲೆ ಏನೂ ತೊಂದರೆ ಆಗುವುದಿಲ್ಲ. ಇದು ರಾಜಕೀಯ ಅನ್ನೋದು ಗೊತ್ತು, ನಾವು ರಾಜಕೀಯವಾಗಿ ಉತ್ತರ ಕೊಡುತ್ತೇವೆ. ಕರ್ನಾಟಕದಿಂದ ಈ ಪ್ರಕರಣದಲ್ಲಿ ತಕ್ಕ ಉತ್ತರ ಕೊಡುತ್ತೇವೆ. ಕರ್ನಾಟಕದಿಂದ ಇದಕ್ಕೆ ಸರಿಯಾದ ಉತ್ತರ ಕೊಡುತ್ತೇವೆ ಎಂದು ಹೇಳಿದರು.
ಯಡಿಯೂರಪ್ಪ ವಿಷಯದಲ್ಲಿ ಬಿಜೆಪಿಯವರು ಚೂರಿ ಹಾಕಿದ್ದಾರೆ. ಮೂರು ಬಾರಿ ಅವರಿಗೆ ಚೂರಿ ಹಾಕಿದ್ದು ನಾವಲ್ಲ. ಯಡಿಯೂರಪ್ಪ ಅವರನ್ನು ಬಿಜೆಪಿಯವರೇ ಜೈಲಿಗೆ ಕಳುಹಿಸಿದ್ದು. ಸಿದ್ದರಾಮಯ್ಯ ಸಾಹೇಬರ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಅವರ ಕೈಗೆ ಮೊದಲು ಮಸಿ ಬಳಿದಿದ್ದನ್ನು ನೋಡಿಕೊಳ್ಳಬೇಕು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
Women and Child Welfare Minister Laxmi Hebbalkar said that the issue of Chief Minister Siddaramaiah resigning with Governor Thaawarchand Gehlot permitting his prosecution does not arise. All ministers and MLAs of Congress were with the chief minister.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm