ಬ್ರೇಕಿಂಗ್ ನ್ಯೂಸ್
17-08-24 06:23 pm Bangalore Correspondent ಕರ್ನಾಟಕ
ಬೆಂಗಳೂರು, ಆ.17: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು ಅರಮನೆ ಮೈದಾನದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ ಎಂದು ದೂರಿದರು.
ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ:
ತನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟಿಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗೆ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ದನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಹೇಳಿದರು.
Karnataka Chief Minister Siddaramaiah on Saturday ruled out his resignation, following the Governor granting sanction to prosecute him, in connection with the Mysuru Urban Development Authority (MUDA) site allotment 'scam', and said he had done no wrong to step down. Terming Governor Thaawarchand Gehlot's decision as "anti-Constitution and against law," he said. It will be questioned in court and that he will battle it out legally.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm