ಬ್ರೇಕಿಂಗ್ ನ್ಯೂಸ್
19-08-24 07:28 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.19: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರೂ, ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಲ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿಯನ್ನು ಆಗಸ್ಟ್ 29 ಕ್ಕೆ ಮುಂದೂಡಿದ್ದು ಅಲ್ಲಿಯ ವರೆಗೆ ಯಾವುದೇ ಕ್ರಮ ಜರುಗಿಸದಂತೆ ಸೂಚನೆ ನೀಡಿದೆ.
ವಿಚಾರಣೆ ಮುಂದೂಡಿದ್ದಲ್ಲದೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ನ್ಯಾಯಲಯ ಆದೇಶ ನೀಡಿದೆ.

ಕರ್ನಾಟಕ ಹೈಕೋರ್ಟ್ ನಲ್ಲಿ ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಸಿದ್ದರಾಮಯ್ಯ ಕುರಿತ ದೂರಿನಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಆದೇಶ ನೀಡಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಸೋಮವಾರ ಬೆಳಗ್ಗೆ ಹೈಕೋರ್ಟ್‌ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಎಸ್‌ಪಿ ಪ್ರದೀಪ್ ಕುಮಾರ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಸ್ನೇಹಮಯಿ ಕೃಷ್ಣ ಪರವಾಗಿ ವಕೀಲ ವಸಂತ್ ಕುಮಾರ್ ವಾದ ಮಂಡಿಸಿದರೆ, ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಿದರು.
ರಾಜ್ಯಪಾಲರ ಬಳಿ 12 ದೂರುಗಳು ಪ್ರಾಸಿಕ್ಯೂಷನ್ ಅನುಮತಿಗಾಗಿ ಕಾಯುತ್ತಿವೆ. ಅದರೆ, ಈವರೆಗೆ ಅವರು ಇದ್ಯಾವುದಕ್ಕೂ ಅನುಮತಿ ನೀಡಿಲ್ಲ. ಸಿದ್ದರಾಮಯ್ಯ ಪ್ರಕರಣದಲ್ಲಿ ಸೂಕ್ತ ಪುರಾವೆ ಇರದಿದ್ದರೂ, ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಅಭಿಷೇಕ್ ಸಿಂಘ್ವಿ ನ್ಯಾಯಾಧೀಶರ ಗಮನಕ್ಕೆ ತಂದರು.
The Karnataka High Court on Monday directed the trial court to take no action against Chief Minister Siddaramaiah following Governor Thawaar Chand Gehlot sanctioning the Congress leader's prosecution in the alleged MUDA land scam case. The interim relief for the embattled Chief Minister will be in effect till August 29, when the High Court will hear this case next.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm