ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am