ಬ್ರೇಕಿಂಗ್ ನ್ಯೂಸ್
23-08-24 01:04 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಇತರ ಮೂವರು ಬಿಜೆಪಿಯ ಮಾಜಿ ಸಚಿವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ತಾಕೀತು ಮಾಡಿ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್, ಸಂವಿಧಾನದ ಆರ್ಟಿಕಲ್ 163 ರ ಅನ್ವಯ ಸಂಪುಟದ ಅಧಿಕಾರವನ್ನು ಬಳಸಿಕೊಂಡು ಸಂಪುಟ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಎಚ್.ಡಿ ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ನಾಲ್ಕು ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಕುಮಾರಸ್ವಾಮಿ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಆಗ್ರಹ ಮಾಡಲಾಗುವುದು ಎಂದರು.
ರಾಜ್ಯಪಾಲರು ಸಲಹೆಯನ್ನು ನಿರಾಕರಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್.ಕೆ. ಪಾಟೀಲ್, ರಾಜ್ಯಪಾಲರ ವಿವೇಚನಾ ಅಧಿಕಾರ ಸೀಮಿತವಾಗಿದ್ದು, ನಮ್ಮ ತೀರ್ಮಾನಕ್ಕೆ ಬದ್ಧವಾಗಿರಬೇಕು. ಅವರು ತಮ್ಮ ಅಧಿಕಾರವನ್ನು ಬಹಳ ವಿವೇಚನೆಯಿಂದ ಚಲಾಯಿಸುವ ಖಾತ್ರಿಯಿದೆ. ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ. "ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19, 17ಎ ಮತ್ತು ಈಗ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 197 ಮತ್ತು 218 ಅಪರಾಧ ಪ್ರಕ್ರಿಯೆ ಸಂಹಿತೆಯಡಿ ಅನುಮತಿ ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಶಶಿಕಲಾ ಜೊಲ್ಲೆ ವಿರುದ್ಧ 2021ರ ಡಿಸೆಂಬರ್ 9 ರಂದು ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಫೆಬ್ರವರಿ 26, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಅಡಿಯಲ್ಲಿ ಲೋಕಾಯುಕ್ತರು ಪೂರ್ವಾನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೂರನೆಯದು ಕುಮಾರಸ್ವಾಮಿ ಅವರ ವಿರುದ್ಧ ನವೆಂಬರ್ 21, 2023 ರಂದು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19 ರ ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು, ಎಸ್ ಐಟಿ ಆರೋಪ ಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಕೋರಿದ್ದ ಸ್ಪಷ್ಟನೆಗೆ ಆಗಸ್ಟ್ 16, 2024ರಂದು ಎಸ್ ಐಟಿ ಅಗತ್ಯ ಸ್ಪಷ್ಟನೆ ನೀಡಿದೆ ಎಂದು ತಿಳಿಸಿದರು.
ನಾಲ್ಕನೆಯದು ಜನಾರ್ದನ ರೆಡ್ಡಿಗೆ ಸಂಬಂಧಿಸಿದ್ದು, ಅವರ ವಿರುದ್ಧ ಮೇ 13, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19 ಮತ್ತು ಬಿಎನ್‌ಎಸ್‌ಎಸ್‌ನ ನಿಬಂಧನೆಗಳ ಅಡಿಯಲ್ಲಿ ಪ್ಯಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು,ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
The Karnataka Cabinet on Thursday recommended Governor Thawar Chand Gehlot to take action on pending prosecution sanctions against several prominent political leaders, including Union minister for heavy industry and steel HD Kumaraswamy.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am