ಬ್ರೇಕಿಂಗ್ ನ್ಯೂಸ್
28-08-24 08:29 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಆಹಾರ ಸುರಕ್ಷತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಅಸುರಕ್ಷಿತ ಆಹಾರ ಪೂರೈಕೆ ತಡೆಗಟ್ಟಲು ಆಹಾರ ಸುರಕ್ಷತಾ ಇಲಾಖೆಯಿಂದ ಎರಡು ದಿನಗಳ ಕಾಲ ಆಂದೋಲನ ರೀತಿಯಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ತಪಾಸಣೆ ಕಾರ್ಯ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವರು, ಹಿಂದೆಂದು ಕಾಣದ ರೀತಿಯಲ್ಲಿ ಸತತವಾಗಿ ಆಹಾರ ಗುಣಮಟ್ಟ ಪರೀಕ್ಷಿಸುವ ಕಾರ್ಯವನ್ನ ಆಹಾರ ಸುರಕ್ಷತಾ ಇಲಾಖೆ ಕಳೆದ ಒಂದು ವರ್ಷದಿಂದ ನಡೆಸಿಕೊಂಡು ಬರುತ್ತಿದೆ. ಇದೇ ಆಗಸ್ಟ್ 30 ಮತ್ತು 31ರಂದು ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿರುವ ಹೋಟೆಲ್ ರೆಸ್ಟೋರೆಂಟ್ ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು. ಅಲ್ಲದೆ, ಮಾಂಸ, ಮೀನು, ಮೊಟ್ಟೆಗಳ ಆಹಾರ ಮಾದರಿಗಳನ್ನ ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ರೀತಿಯ ತಪಾಸಣೆಗಳಿಂದ ಸಾರ್ವಜನಿಕರಲ್ಲಿ ಆಹಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಲಿದೆ. ಜನರನ್ನ ಎಚ್ಚರಿಸುವುದು ನಮ್ಮ ಮುಖ್ಯ ಉದ್ದೇಶ. ಜೊತೆಗೆ ಅಸುರಕ್ಷಿತ ಆಹಾರ ತಯಾರಿಸುತ್ತಿರುವ ಉದ್ದಿಮೆದಾರರ ಮೇಲೂ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತಿದೆ ಎಂದರು. ಅಲ್ಲದೆ, ಸಾರ್ವಜನಿಕರು ತಾವು ಸೇವಿಸುವ ಆಹಾರದ ಗುಣಮಟ್ಟವನ್ನ ತಾವೇ ಪರಿಕ್ಷಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಹೊಟೇಲ್, ರೆಸ್ಟೋರೆಂಟ್, ಫುಡ್ ಪಾರ್ಕ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್ ಗಳನ್ನ ಅಳವಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಒಂದು ಸಾವಿರ ಕಿಟ್ ಗಳು ಬಂದಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿವೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆಹಾರ ಉದ್ದಿಮೆದಾರರಿಗೆ ಪರವಾನಿಗೆ ನೀಡಲು ರಾಜ್ಯಕ್ಕೆ ಗುರಿ ನೀಡಲಾಗಿದ್ದು ಶೇ. 68 ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದ ಆಹಾರ ಉದ್ದಿಮೆದಾರರು ನೊಂದಾಯಿಸಿಕೊಂಡು ಪರವಾನಿಗೆ ಪಡೆಯಬೇಕು. ಪರವಾನಿಗೆ ಪಡೆಯದೇ ಇದ್ದರೆ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.
ಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತ ಎಂದು ಮತ್ತು 27 ಮಾದರಿಗಳು ಕ್ರಿಮಿನಾಶಕಗಳ ಶೇಷಾಂಶಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಮತ್ತು Fungus growth ಕಂಡುಬಂದಿರುವುದರಿಂದ ಅಸುರಕ್ಷಿತ ಎಂದು ವರದಿ ಬಂದಿದೆ. ಅಲ್ಲದೇ 211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ವರದಿ ಬಂದ ನಂತರ ಕ್ರಮ ಜರುಗಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಇಲಾಖೆಯಿಂದ ಏಪ್ರಿಲ್ 2024 ರಿಂದ ಇದುವರೆಗೆ 8418 ಸರ್ವೆ ಆಹಾರ ಮಾದರಿಗಳನ್ನು ಮತ್ತು 2593 ಕಾನೂನಾತ್ಮಕ ಆಹಾರ ಮಾದರಿಗಳನ್ನು (ಜುಲೈ-24 ಒಳಗೊಂಡಂತೆ) ಹಾಗೂ ಜುಲೈ-2024ರ ಮಾಹೆಯಲ್ಲಿಯೇ 2753 ಸರ್ವೆ ಆಹಾರ ಮಾದರಿಗಳನ್ನು ಮತ್ತು 711 ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ಇಲಾಖೆಯ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳಿಗೆ ಆನ್‌ಲೈನ್ ಮೂಲಕ ಸಲ್ಲಿಕೆಯಾಗುವ ಪರವಾನಿಗೆ/ನೊಂದಣಿ ಅರ್ಜಿಗಳನ್ನು ಶೀಘ್ರಗತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುವಂತೆ ಮತ್ತು ತಪಾಸಣೆಯ ವಿವರಗಳನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ದಾಖಲಿಸಲು ಟ್ಯಾಬ್‌ಗಳನ್ನು ವಿತರಿಸಲಾಯಿತು.
Food testing campaign to be done all over karnataka says Dinesh Gundu Rao
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm